ಧಾರವಾಡ ಇಕೋರ್ಟ್ ನೇಮಕಾತಿ 2023 : 33 ಬೆರಳಚ್ಚುಗಾರ-ನಕಲುದಾರ, ಪ್ಯೂನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ ಜಿಲ್ಲಾ ನ್ಯಾಯಾಲಯದ ನೇಮಕಾತಿಯಲ್ಲಿ (Dharwad District Court Recruitment 2023) 33 ಬೆರಳಚ್ಚುಗಾರ-ನಕಲುದಾರ, ಪ್ಯೂನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯಂತೆ ಫೆಬ್ರವರಿ 2023 ರ ಮೂಲಕ ಟೈಪಿಸ್ಟ್-ಕಾಪಿಸ್ಟ್, ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಧಾರವಾಡ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಧಾರವಾಡ ಇಕೋರ್ಟ್ (ಧಾರವಾಡ ಜಿಲ್ಲಾ ನ್ಯಾಯಾಲಯ)
ಹುದ್ದೆಗಳ ಸಂಖ್ಯೆ : 33 ಹುದ್ದೆಗಳು
ಉದ್ಯೋಗ ಸ್ಥಳ : ಧಾರವಾಡ
ಹುದ್ದೆಯ ಹೆಸರು : ಬೆರಳಚ್ಚುಗಾರ-ನಕಲುದಾರ, ಪ್ಯೂನ್
ವೇತನ : ರೂ.17000-42000/- ಪ್ರತಿ ತಿಂಗಳು

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಬೆರಳಚ್ಚುಗಾರ-ನಕಲುದಾರ : 2 ಹುದ್ದೆಗಳು
ಪ್ಯೂನ್ : 31 ಹುದ್ದೆಗಳು

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :
ಬೆರಳಚ್ಚುಗಾರ-ನಕಲುದಾರ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.
ಪ್ಯೂನ್ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ಧಾರವಾಡ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾರ್ಚ್‌ 1,2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳು : 05 ವರ್ಷಗಳು
  • ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು : 03 ವರ್ಷಗಳು
  • ಪಿಡಬ್ಲ್ಯೂಡಿ/ವಿಧವೆ ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ-1/2ಎ/2ಬಿ/3ಎ & 3ಬಿ ಅಭ್ಯರ್ಥಿಗಳು : ರೂ.200/-
ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು : ರೂ.100/-

ಪಾವತಿ ವಿಧಾನ:
ಧಾರವಾಡ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್/ಚಲನ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಧಾರವಾಡ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನ ವಿವರ:
ಬೆರಳಚ್ಚುಗಾರ-ನಕಲುದಾರ : ರೂ.21400-42000/-
ಪ್ಯೂನ್ : ರೂ.17000-28950/-

ಇದನ್ನೂ ಓದಿ : AIASL Recruitment 2023 : 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ಇದನ್ನೂ ಓದಿ : Bangalore DCC Bank Recruitment 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Union Bank Recruitment 2023 : ಚಾರ್ಟರ್ಡ್ ಅಕೌಂಟೆಂಟ್, ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಫೆಬ್ರವರಿ 2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಮಾರ್ಚ್ 2023
  • ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03 ಮಾರ್ಚ್ 2023

Dharwad District Court Recruitment 2023 : Dharwad eCourt Recruitment 2023 : Application Invitation for 33 Typist-Copier, Peon Posts

Comments are closed.