ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ (DHFWS Belgaum Recruitment 2023) ಅಧಿಕೃತ ಅಧಿಸೂಚನೆ ಜೂನ್ 2023 ರ ಮೂಲಕ ಮನೋವೈದ್ಯ, ಮನೋವೈದ್ಯಕೀಯ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಬೆಳಗಾವಿ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಬೆಳಗಾವಿ (DHFWS)
ಹುದ್ದೆಗಳ ಸಂಖ್ಯೆ : 02 ಹುದ್ದೆ
ಉದ್ಯೋಗ ಸ್ಥಳ : ಬೆಳಗಾವಿ
ಹುದ್ದೆಯ ಹೆಸರು : ಮನೋವೈದ್ಯ, ಮನೋವೈದ್ಯಕೀಯ ನರ್ಸ್
ವೇತನ : ರೂ.14000-110000/- ಪ್ರತಿ ತಿಂಗಳು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :
- ಮನೋವೈದ್ಯ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ M.D, ಮನೋವೈದ್ಯಶಾಸ್ತ್ರದಲ್ಲಿ DNB, DPMಯನ್ನು ಪೂರ್ಣಗೊಳಿಸಿರಬೇಕು.
- ಸೈಕಿಯಾಟ್ರಿಕ್ ನರ್ಸ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಇನ್ ನರ್ಸಿಂಗ್, ಪಿಜಿ ಡಿಪ್ಲೋಮಾ ಇನ್ ಸೈಕಿಯಾಟ್ರಿಕ್ ನರ್ಸಿಂಗ್‌ನಲ್ಲಿ ಉತ್ತೀರ್ಣರಾಗಿರಬೇಕು.
ಅನುಭವದ ವಿವರ :
ಮನೋವೈದ್ಯರು : ಅಭ್ಯರ್ಥಿಗಳು ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
ಸೈಕಿಯಾಟ್ರಿಕ್ ನರ್ಸ್ : ಅಭ್ಯರ್ಥಿಗಳು ಸೈಕಿಯಾಟ್ರಿ/ಮಾನಸಿಕ ಆರೋಗ್ಯ ಸಂಸ್ಥೆ/ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಕೆಲಸ ಮಾಡಿದ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
ವಯೋಮಿತಿ ವಿವರ :
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 65 ವರ್ಷ ವಯಸ್ಸಿನ ಒಳಗಿನ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಬೆಳಗಾವಿ ನಿಯಮಾವಳಿಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ)ದ ವಿವರ :
ಮನೋವೈದ್ಯರು : ರೂ.110000/-
ಮನೋವೈದ್ಯಕೀಯ ನರ್ಸ್ : ರೂ.14000/-
DHFWS ಬೆಳಗಾವಿ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಲಸಿಕೆ ಸಂಸ್ಥೆ ಟಿಳಕವಾಡಿ, ಬೆಳಗಾವಿ. ಜೂನ್ 16 2023ರಂದು ಹಾಜರಾಗಬಹುದು.
ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 02 ಜೂನ್ 2023
ನೇರ ಸಂದರ್ಶನ ದಿನಾಂಕ : 16 ಜೂನ್ 2023
DHFWS Belgaum Recruitment 2023 : Direct Interview for the post of Psychiatrist, Salary above 1 Lakh