ಬುಧವಾರ, ಏಪ್ರಿಲ್ 30, 2025
Homejob NewsDHFWS ಚಿತ್ರದುರ್ಗ ನೇಮಕಾತಿ 2023 : ನರ್ಸ್, ಮೆಡಿಕಲ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

DHFWS ಚಿತ್ರದುರ್ಗ ನೇಮಕಾತಿ 2023 : ನರ್ಸ್, ಮೆಡಿಕಲ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Advertisement -

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ (DHFWS Chitradurga Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್ ಹಾಗೂ ವೈದ್ಯಕೀಯ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

DHFWS ಚಿತ್ರದುರ್ಗ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ (DHFWS)
ಹುದ್ದೆಗಳ ಸಂಖ್ಯೆ : 12 ಹುದ್ದೆಗಳು
ಉದ್ಯೋಗ ಸ್ಥಳ : ಚಿತ್ರದುರ್ಗ
ಹುದ್ದೆಯ ಹೆಸರು : ನರ್ಸ್, ವೈದ್ಯಕೀಯ ಅಧಿಕಾರಿಗಳು
ವೇತನ : ರೂ.12839-43141/- ಪ್ರತಿ ತಿಂಗಳು

DHFWS ಚಿತ್ರದುರ್ಗ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ವೈದ್ಯಕೀಯ ಅಧಿಕಾರಿಗಳು : 4 ಹುದ್ದೆಗಳು
ನರ್ಸ್ : 4 ಹುದ್ದೆಗಳು
ಕಿರಿಯ ವಿಭಾಗದ ಸಹಾಯಕರು/ಪ್ರಯೋಗಾಲಯ ತಂತ್ರಜ್ಞರು : 4 ಹುದ್ದೆಗಳು

DHFWS ಚಿತ್ರದುರ್ಗ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿದ್ಯಾರ್ಹತೆ ವಿವರ :

  • ವೈದ್ಯಕೀಯ ಅಧಿಕಾರಿಗಳು : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ MBBS ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ನರ್ಸ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ B.Sc, P.B.Sc, ಡಿಪ್ಲೋಮಾ ಇನ್ ನರ್ಸಿಂಗ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಜೂನಿಯರ್ ವಿಭಾಗದ ಸಹಾಯಕರು/ಪ್ರಯೋಗಾಲಯ ತಂತ್ರಜ್ಞರು : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ SSLC, PUC, ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾರ್ಚ್‌ 20, 2023 ರಂತೆ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC/ST/Cat-I ಅಭ್ಯರ್ಥಿಗಳು : 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು : 03 ವರ್ಷಗಳು

ಆಯ್ಕೆ ಪ್ರಕ್ರಿಯೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

DHFWS ಚಿತ್ರದುರ್ಗ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ಸಂಬಳ (ತಿಂಗಳಿಗೆ)ದ ವಿವರ :
ವೈದ್ಯಕೀಯ ಅಧಿಕಾರಿಗಳು : ರೂ.43141/-
ನರ್ಸ್ : ರೂ.13225/-
ಕಿರಿಯ ವಿಭಾಗದ ಸಹಾಯಕರು/ಪ್ರಯೋಗಾಲಯ ತಂತ್ರಜ್ಞರು : ರೂ.12839/-

DHFWS ಚಿತ್ರದುರ್ಗ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಜಿಲ್ಲಾ ಯೋಜನಾ ನಿರ್ವಹಣಾ ಘಟಕ (N.H.M), ಜಿಲ್ಲಾ ಪ್ರಯೋಗಾಲಯ ಆವರಣ, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗಕ್ಕೆ ಮಾರ್ಚ್‌ 20, 2023 ರಂದು ಅಥವಾ ಮೊದಲು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : KFD ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ : KPSC ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08 ಏಪ್ರಿಲ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಮಾರ್ಚ್ 2023

DHFWS Chitradurga Recruitment 2023 : Application Invitation for Nurse, Medical Officer Posts

RELATED ARTICLES

Most Popular