ವಿಜ್ಞಾನಿಯಾಗುವ ನಿಮ್ಮ ಕನಸು ನನಸಾಗುವ ಸಮಯ : DRDO ದ ಸೈಂಟಿಸ್ಟ್ ಹುದ್ದೆ ನೇಮಕಾತಿಗೆ ತಕ್ಷಣ ಅರ್ಜಿ ಸಲ್ಲಿಸಿ
ಡಿಆರ್‌ಡಿಒ ಒಟ್ಟು 33 ಸೈಂಟಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹಾಗಾದ್ರೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂದು ಚೆಕ್ ಮಾಡಿ.
ವಿಜ್ಞಾನಿಗಳಾಗಬೇಕೆಂಬ ಕನಸು ಕಾಣುತ್ತಿರುವ ಯುವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್. ಭಾರತ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾಗಿರುವ ಡಿಆರ್‌ಡಿಒ, C, D ಮತ್ತು E ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿಯ ಮೂಲಕ ಡಿಆರ್‌ಡಿಒ ವಿವಿಧ ಹುದ್ದೆಗಳು ಸೇರಿದಂತೆ ಒಟ್ಟು 33 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಜೂನ್ 19 ಕೊನೆಯ ದಿನವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲ ನೀಡಿರುವ ಅಧಿಕೃತ ವೆಬ್‌ಸೈಟ್ rac.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಆರ್‌ಡಿಒ ನೇಮಕಾತಿಯಲ್ಲಿ ಈ ಅರ್ಹತೆಗಳಿರುವ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ.
ಹುದ್ದೆಯ ವಿವರಗಳು
ಡಿಆರ್‌ಡಿಒ ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 33 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಇವುಗಳಲ್ಲಿ ಎರಡು ಹುದ್ದೆಗಳು ಸೈಂಟಿಸ್ಟ್ E , 11 ಹುದ್ದೆಗಳು ಸೈಂಟಿಸ್ಟ್ D ಮತ್ತು 20 ಹುದ್ದೆಗಳು ಸೈಂಟಿಸ್ಟ್ C ಗೆ ಮೀಸಲಾಗಿವೆ.
ವಿದ್ಯಾರ್ಹತೆ
ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಎಂಜಿನಿಯರಿಂಗ್ ಪದವಿ ಅಥವಾ ತಂತ್ರಜ್ಞಾನದಲ್ಲಿ ಪದವಿ ಅಥವಾ ಇತರ ನಿಗದಿತ ಪದವಿಗಳನ್ನು ಹೊಂದಿರಬೇಕು. ಇದರೊಂದಿಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರಬೇಕು.
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು ಮತ್ತು ಗರಿಷ್ಠ ವಯಸ್ಸನ್ನು ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ. ಸಾಮಾನ್ಯವಾಗಿ 35 ರಿಂದ 45 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅವಕಾಶವನ್ನು ಪಡೆದಿರುತ್ತಾರೆ. ಮೀಸಲು ವರ್ಗದ ಅಭ್ಯರ್ಥಿಗಳು ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಪಡೆದಿರುತ್ತಾರೆ.
ಇದನ್ನೂ ಓದಿ: ಬಿಇ, ಬಿಟೆಕ್ ಆದವರಿಗೆ ಗುಡ್‌ನ್ಯೂಸ್ : CDAC ನೇಮಕಾತಿಯಲ್ಲಿ ಪ್ರಾಜೆಕ್ಟ್ ಎಂಜಿನಿಯರ್, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ತಮ್ಮ ಅರ್ಜಿಯೊಂದಿಗೆ ₹100 ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಪಿಎಚ್ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಪ್ರಕ್ರಿಯೆ ಹೇಗೆ?
- ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು, ಮೊದಲು rac.gov.in/drdo/public/register ಪೋರ್ಟಲ್‌ಗೆ ಭೇಟಿ ನೀಡಿ.
- ಇದರ ನಂತರ, ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ಮತ್ತು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರು ನೋಂದಾಯಿಸಿ.
- ನೋಂದಣಿ ನಂತರ, ಇತರ ವಿವರಗಳನ್ನು ಭರ್ತಿ ಮಾಡುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
- ಅಂತಿಮವಾಗಿ, ನಿಗದಿತ ಶುಲ್ಕವನ್ನು ಪಾವತಿಸಿ.
- ಬಳಿಕ ಇನ್ನೊಮ್ಮೆ ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯನ್ನು ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಿ. ಭವಿಷ್ಯದ ಉಲ್ಲೇಖಕ್ಕಾಗಿ ಇದರ ಮುದ್ರಣವನ್ನು ತೆಗೆದುಕೊಳ್ಳುವುದನ್ನು ಮರೆಯಬೇಡಿ.



