ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಏಕಲವ್ಯ ಮಾದರಿ ವಸತಿ ಶಾಲೆಗೆ ಇಂದೇ ಅರ್ಜಿ ಸಲ್ಲಿಸಿ
EMRS Recruitment 2025: ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಅಧಿಕೃತವಾಗಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಇನ್ನೂ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದಂತಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಕೆ ಅಕ್ಟೋಬರ್ 23 ಎಂದು ಹೇಳಲಾಗಿತ್ತು. ಆದರೆ ಈಗ ಅವಧಿಯನ್ನು ಇನ್ನೂ 5 ದಿನಗಳವರೆಗೆ ವಿಸ್ತರಿಸಲಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ಈಗ ಅಕ್ಟೋಬರ್ 28 ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ
ಪ್ರಾಂಶುಪಾಲರು – 225 ಹುದ್ದೆಗಳು
ಟಿಜಿಟಿ – 3962 ಹುದ್ದೆಗಳು
ಪಿಜಿಟಿ – 1460 ಹುದ್ದೆಗಳು
ಸ್ಟಾಫ್ ನರ್ಸ್ – 550 ಹುದ್ದೆಗಳು
ಹಾಸ್ಟೆಲ್ ವಾರ್ಡನ್ – 635
ಲೆಕ್ಕಪತ್ರಗಾರ – 61
ಜೂನಿಯರ್ ಸೆಕ್ರೆಟರಿಯೇಟ್ (ಸಹಾಯಕ) – 228 ಹುದ್ದೆಗಳು
ಪ್ರಯೋಗಾಲಯ (ಸಹಾಯಕ) – 146 ಹುದ್ದೆಗಳು
ಇದನ್ನೂ ಓದಿ: ಡಿಪ್ಲೊಮಾ, ಐಟಿಐ ಮಾಡಿದವರಿಗೆ ಗುಡ್ ನ್ಯೂಸ್! BEL ನಿಂದ 162 ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ
ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು ಆಯಾ ಹುದ್ದೆಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳ ಕನಿಷ್ಠ ವಯಸ್ಸು 30, 35, 40 ಮತ್ತು 50 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ, 12ನೇ ತರಗತಿ ಹಾಗೂ ಹದ್ದೆಗೆ ಅನುಗುಣವಾಗಿ ಸೂಕ್ತವಾದ ಪದವಿಯನ್ನು ಹೊಂದಿರಬೇಕು.
ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ. ಪದವಿಯನ್ನು ಹೊಂದಿರಬೇಕು. ಟಿಜಿಟಿ ಮತ್ತು ಪಿಜಿಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಅಥವಾ ಬಿ.ಎಡ್. ಪದವಿಯನ್ನು ಹೊಂದಿರಬೇಕು.
ಅಕೌಂಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ವಾಣಿಜ್ಯ ಅಥವಾ ಲೆಕ್ಕಪತ್ರ ನಿರ್ವಹಣೆಯಲ್ಲಿ ಪದವಿಯನ್ನು ಹೊಂದಿರಬೇಕು.
ಪರೀಕ್ಷಾ ವೇಳಾಪಟ್ಟಿ
ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ದಿನಾಂಕಗಳನ್ನು ಸಹ ಘೋಷಿಸಲಾಗಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಬೋಧಕ ಮತ್ತು ಬೋಧಕೇತರ ಪರೀಕ್ಷೆಗಳು ಡಿಸೆಂಬರ್ 13, 14 ಮತ್ತು 23 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಇದನ್ನೂ ಓದಿ: ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ : ಅರ್ಹತೆಗಳೇನು
(EMRS Recruitment 2025 registration last date extended up to October 28)



