ESIC ನೇಮಕಾತಿ 2026 : 225 ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ESIC Recruitment 2026: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ ವೃತ್ತಿಯನ್ನು ನಡೆಸಬೇಕೆಂಬ ಕನಸು ಹೊತ್ತಿರುವ ವೈದ್ಯರಿಗೆ ಸುವರ್ಣಾವಕಾಶ ಒದಗಿಬಂದಿದೆ. ಕಾರ್ಮಿಕರ ರಾಜ್ಯ ವಿಮಾ ನಿಗಮ (ESIC) ವಿಮಾ ವೈದ್ಯಕೀಯ ಅಧಿಕಾರಿ ಗ್ರೇಡ್‌ 2 (IMO Gr. II) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 17, 2026 ಕೊನೆಯ ದಿನವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನದ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಗಳು MBBS ಪದವಿ ಪಡೆದಿರಬೇಕು. ಅವರು 2024 ರ ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆಯಲ್ಲಿ ಕಾಣಿಸಿಕೊಂಡಿರಬೇಕು ಮತ್ತು ಪ್ರತಿಭಾ ಸೇತು ಪೋರ್ಟಲ್‌ನಲ್ಲಿ ದಾಖಲಾಗಿರಬೇಕು.

ವಯೋಮಿತಿ ಎಷ್ಟು?

ಆಗಸ್ಟ್ 1, 2024 ರಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳನ್ನು ಮೀರಬಾರದು. ಮೀಸಲು ವರ್ಗಗಳ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿ ಸಡಿಲಿಕೆಯಿರುತ್ತದೆ.

ಖಾಲಿ ಇರುವ ಹುದ್ದೆಗಳೆಷ್ಟು?

ಇಎಸ್‌ಐ ನೇಮಕಾತಿ ಅಭಿಯಾನದಲ್ಲಿ 225 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಇವುಗಳಲ್ಲಿ 64 ಹುದ್ದೆಗಳು ಎಸ್‌ಸಿ, 43 ಎಸ್‌ಟಿ, 33 ಒಬಿಸಿ, 22 ಇಡಬ್ಲ್ಯೂಎಸ್ ಮತ್ತು 63 ಮೀಸಲಾತಿ ರಹಿತ ವರ್ಗಗಳಿಗೆ ವರ್ಗವಾರು ಮೀಸಲಾಗಿವೆ.

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

ನಿಮಗೆಷ್ಟು ಸಂಬಳ ಸಿಗುತ್ತದೆ?

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 10ರ ಪ್ರಕಾರ ತಿಂಗಳಿಗೆ 56,100 ರಿಂದ 1,77,500 ರೂ. ಗಳವರೆಗೆ ವೇತನ ನೀಡಲಾಗುವುದು.

ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ಪಾಸಾದ್ರೆ ಸಾಕು ಆರ್‌ಬಿಐನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ!

ಆಪ್‌ಲೈನ್‌ನಲ್ಲೂ ಅರ್ಜಿ ಸಲ್ಲಿಸಲು ಅವಕಾಶ

ಇಎಸ್‌ಐನ ವಿಮಾ ವೈದ್ಯಕೀಯ ಅಧಿಕಾರಿ ಗ್ರೇಡ್ 2 ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಭರ್ತಿ ಮಾಡಿದ ಫಾರ್ಮ್ ಅನ್ನು ತಮ್ಮ ದಾಖಲೆಗಳ ಸ್ವಯಂ ದೃಢೀಕರಿಸಿದ ನಮೂನೆಗಳೊಂದಿಗೆ ಲಗತ್ತಿಸಿ ಸ್ಪೀಡ್ ಪೋಸ್ಟ್ ಮೂಲಕ ಜಂಟಿ ನಿರ್ದೇಶಕರು (ನೇಮಕಾತಿ), ಇಎಸ್‌ಐ ಕಾರ್ಪೊರೇಷನ್, ಪಂಚದೀಪ್ ಭವನ, ಸಿಐಜಿ ಮಾರ್ಗ, ನವದೆಹಲಿ-110002 ಗೆ ಕಳುಹಿಸಬೇಕು.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories