ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ (Hatti Gold Mining Company Recruitment 2023 )ವಿವಿಧ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜ್‌ಮೆಂಟ್‌ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿಯ ಸಂಪೂರ್ಣ ವಿವರ :
ಇಲಾಖೆ ಹೆಸರು : ಹಟ್ಟಿ ಚಿನ್ನದ ಗಣಿ ಕಂಪನಿ
ಹುದ್ದೆಗಳ ಹೆಸರು : ಮ್ಯಾನೇಜ್‌ಮೆಂಟ್‌ ಟ್ರೀನಿ ಹುದ್ದೆ
ಹುದ್ದೆಗಳ ಸಂಖ್ಯೆ : 29 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌

ವಿದ್ಯಾರ್ಹತೆ ವಿವರ :
ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಇಂಜಿನಿಯರಿಂಗ್/ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪಡೆದಿಬೇಕು.

ವಯೋಮಿತಿ :
ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

ವೇತನ ಶ್ರೇಣಿ ವಿವರ :
ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 47300 ರೂ. ಗಳಿಂದ 83200 ರೂ.ಗಳವರೆಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ :
ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೀಸಲಾತಿ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವಿರುತ್ತದೆ. ಇನ್ನು ಸಾಮಾನ್ಯ ಅಭ್ಯರ್ಥಿಗಳಿಗೆ 500ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆಯ್ಕೆ ವಿಧಾನ :
ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನು ವೃತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ : Agriculture Insurance Company of India Recruitment 2023 : ಕೃಷಿ ವಿಮಾ ಕಂಪೆನಿಯಲ್ಲಿ ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ

ಇದನ್ನೂ ಓದಿ : ಎಡಿಎ ನೇಮಕಾತಿ 2023 : ಎಲೆಕ್ಟ್ರಿಷಿಯನ್, ಡ್ರಾಫ್ಟ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : BMRCL ನೇಮಕಾತಿ 2023 : ಅಗ್ನಿಶಾಮಕ ಇನ್ಸ್‌ಪೆಕ್ಟರ್, ಅಸೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಫೆಬ್ರವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಮಾರ್ಚ್‌ 2023

Hatti Gold Mining Company Recruitment 2023 : Application Invitation for Various Posts

Comments are closed.