ಸೋಮವಾರ, ಏಪ್ರಿಲ್ 28, 2025
Homejob NewsHMT Machine Tools Limited Recruitment 2023 : ಡಿಪ್ಲೊಮಾ, ಪದವಿಧರರಿಗೆ ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ...

HMT Machine Tools Limited Recruitment 2023 : ಡಿಪ್ಲೊಮಾ, ಪದವಿಧರರಿಗೆ ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿ

- Advertisement -

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯಲ್ಲಿ (HMT Machine Tools Limited Recruitment 2023) ಖಾಲಿ ಇರುವ ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಫೆಬ್ರವರಿ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಹುದ್ದೆಯ ಅಧಿಸೂಚನೆ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 40 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್
ವೇತನ : ರೂ.8000-9000/- ಪ್ರತಿ ತಿಂಗಳು

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಡಿಪ್ಲೊಮಾ ಅಪ್ರೆಂಟಿಸ್ : 20 ಹುದ್ದೆಗಳು
ಗ್ರಾಜುಯೇಟ್ ಅಪ್ರೆಂಟಿಸ್ : 20 ಹುದ್ದೆಗ

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಡಿಪ್ಲೊಮಾ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೊಮಾ ಇನ್ ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಇಂಜಿನಿಯರ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಗ್ರಾಜುಯೇಟ್ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ :
ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನ ವಿವರ :
ಡಿಪ್ಲೋಮಾ ಅಪ್ರೆಂಟಿಸ್ : ರೂ.8000/-
ಪದವೀಧರ ಅಪ್ರೆಂಟಿಸ್ : ರೂ.9000/-

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, mbxtrg@hmtmachinetools.com ಗೆ ಫೆಬ್ರವರಿ 28, 2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 10 ಫೆಬ್ರವರಿ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 28 ಫೆಬ್ರವರಿ 2023

ಇದನ್ನೂ ಓದಿ : ಕೆನರಾ ಕಾಲೇಜ್ ಸೊಸೈಟಿ ಕುಮಟಾ ನೇಮಕಾತಿ 2023 : ವಿವಿಧ ಸಹಾಯಕ ಪ್ರಾಧ್ಯಾಪಕ, ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಕರ್ನಾಟಕ ಹೈಕೋರ್ಟ್‌ ನೇಮಕಾತಿ 2023 : ಕ್ಲರ್ಕ್‌ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : SSLR Karnataka Recruitment 2023 : 2000 ಸರ್ವೇಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಮನಿಸಿ : ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9880234325 ಅನ್ನು ಸಂಪರ್ಕಿಸಬಹುದಾಗಿದೆ.

HMT Machine Tools Limited Recruitment 2023 : Apply for Apprentice Posts for Diploma, Graduates

RELATED ARTICLES

Most Popular