HMT Machine Tools Limited Recruitment 2023 : ಡಿಪ್ಲೊಮಾ, ಪದವಿಧರರಿಗೆ ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿ

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಯಲ್ಲಿ (HMT Machine Tools Limited Recruitment 2023) ಖಾಲಿ ಇರುವ ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಫೆಬ್ರವರಿ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ಹುದ್ದೆಯ ಅಧಿಸೂಚನೆ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 40 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್
ವೇತನ : ರೂ.8000-9000/- ಪ್ರತಿ ತಿಂಗಳು

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಡಿಪ್ಲೊಮಾ ಅಪ್ರೆಂಟಿಸ್ : 20 ಹುದ್ದೆಗಳು
ಗ್ರಾಜುಯೇಟ್ ಅಪ್ರೆಂಟಿಸ್ : 20 ಹುದ್ದೆಗ

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಡಿಪ್ಲೊಮಾ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೊಮಾ ಇನ್ ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಇಂಜಿನಿಯರ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಗ್ರಾಜುಯೇಟ್ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ :
ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನ ವಿವರ :
ಡಿಪ್ಲೋಮಾ ಅಪ್ರೆಂಟಿಸ್ : ರೂ.8000/-
ಪದವೀಧರ ಅಪ್ರೆಂಟಿಸ್ : ರೂ.9000/-

ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಎಚ್‌ಎಮ್‌ಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ ಫೆಬ್ರವರಿ 28, 2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 10 ಫೆಬ್ರವರಿ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 28 ಫೆಬ್ರವರಿ 2023

ಇದನ್ನೂ ಓದಿ : ಕೆನರಾ ಕಾಲೇಜ್ ಸೊಸೈಟಿ ಕುಮಟಾ ನೇಮಕಾತಿ 2023 : ವಿವಿಧ ಸಹಾಯಕ ಪ್ರಾಧ್ಯಾಪಕ, ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಕರ್ನಾಟಕ ಹೈಕೋರ್ಟ್‌ ನೇಮಕಾತಿ 2023 : ಕ್ಲರ್ಕ್‌ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : SSLR Karnataka Recruitment 2023 : 2000 ಸರ್ವೇಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಮನಿಸಿ : ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ, ಮೊಬೈಲ್ ಸಂಖ್ಯೆ: 9880234325 ಅನ್ನು ಸಂಪರ್ಕಿಸಬಹುದಾಗಿದೆ.

HMT Machine Tools Limited Recruitment 2023 : Apply for Apprentice Posts for Diploma, Graduates

Comments are closed.