ಐಬಿಪಿಎಸ್‌ ಕ್ಲರ್ಕ್‌ ಪ್ರಿಲಿಮ್ಸ್‌ ಪರೀಕ್ಷೆ ಹಾಲ್‌ ಟಿಕೆಟ್‌: ಡೌನ್‌ಲೋಡ್‌ ಮಾಡುವುದು ಹೇಗೆ?

IBPS Clerk Prelims Admit Card 2025: ಇನ್ಸ್ಟಿಟ್ಯೂಟ್ ಆಫ್‌ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್ ಕ್ಲರ್ಕ್‌ ಪ್ರಿಲಿಮ್ಸ್‌ ಪ್ರವೇಶ ಪರೀಕ್ಷೆಯ ಹಾಲ್‌ ಟಿಕಟ್‌ ಅನ್ನು ಬಿಡುಗಡೆ ಮಾಡಿದೆ.

ಪರೀಕ್ಷೆಗೆ ಹಾಜಾರಾಗಲು ಬಯಸುವ ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಅದಕ್ಕೆ ಅಭ್ಯರ್ಥಿಗಳು ಮೊದಲಿಗೆ ತಮ್ಮ ನೋಂದಣಿ ಸಂಖ್ಯೆ, ಜನ್ಮದಿನಾಂಕ/ಪಾಸ್‌ವರ್ಡ್‌ ನಮೂದಿಸಿ ಲಾಗಿನ್‌ ಆಗಬೇಕು. ಅಭ್ಯರ್ಥಿಗಳು ಹಾಲ್‌ ಟಿಕೆಟ್‌ ಅನ್ನು ಅಕ್ಟೋಬರ್‌ 5, 2025 ರವರೆಗೆ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಐಬಿಪಿಎಸ್‌ ಕ್ಲರ್ಕ್‌ ಪ್ರಿಲಿಮ್ಸ್‌ ಪರೀಕ್ಷೆ ಯಾವಾಗ?

ಐಬಿಪಿಎಸ್‌ ಕ್ಲರ್ಕ್‌ ಪ್ರಿಲಿಮ್ಸ್‌ ಪರೀಕ್ಷೆಯು ಅಕ್ಟೋಬರ್‌ 4, 5 ಮತ್ತು 11 ರಂದು ನಡೆಯಲಿದೆ. ಪ್ರಿಲಿಮಿನಿರಿ ಪರೀಕ್ಷೆಯು ಆನ್‌ಲೈನ್‌ ನಲ್ಲಿ ನಡೆಸಲಾಗುತ್ತಿದೆ. ಪ್ರಶ್ನೆ ಪತ್ರಿಕೆಯು ಒಟ್ಟು 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ 30 ಅಂಕಗಳ ಇಂಗ್ಲೀಷ್‌ ಭಾಷೆಯ ಪ್ರಶ್ನೆ, 35 ಅಂಕಗಳು ನ್ಯೂಮೆರಿಕಲ್‌ ಎಬಿಲಿಟಿ ಹಾಗೂ 35 ಅಂಕಗಳು ರೀಜನಿಂಗ್‌ ಎಬಿಲಿಟಿ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪ್ರಶ್ನೆ ಪ್ರತ್ರಿಕೆಗೆ ಉತ್ತರಿಸಲು ಅಭ್ಯರ್ಥಿಗಳಿಗೆ ಒಂದು ಗಂಟೆಯ ಕಾಲಾವಕಾಶವಿರುತ್ತದೆ.

ಇದನ್ನೂ ಓದಿ: ಡಿಗ್ರಿ ಆದವರಿಗೆ ಆಫೀಸರ್ ಆಗುವ ಸುವರ್ಣಾವಕಾಶ: ಬ್ಯಾಂಕ್‌ ಆಫ್ ಮಹಾರಾಷ್ಟ್ರಕ್ಕೆ ಇಂದೇ ಅರ್ಜಿ ಸಲ್ಲಿಸಿ

ಐಬಿಪಿಎಸ್‌ ಕ್ಲರ್ಕ್‌ ಪ್ರಿಲಿಮ್ಸ್‌ ಪರೀಕ್ಷೆ ಹಾಲ್‌ ಟಿಕೆಟ್‌ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ?

  • ಮೊದಲಿಗೆ ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in ಗೆ ಭೇಟಿ ನೀಡಬೇಕು.
  • ನಂತರ ಮುಖಪುಟದಲ್ಲಿ ನೀಡಲಾದ ‘Online Preliminary Exam Call Letter for CRP-CSA-XV’ ಫಲಿತಾಂಶದ ಲಿಂಕ್‌ ಮೇಲೆ ಕ್ಲಿಕ್ಕಿಸಬೇಕು.
  • ಈಗ ಲಾಗಿನ್‌ ಆಗಬೇಕು.
  • ನಿಮ್ಮ ಹಾಲ್‌ ಟಿಕೆಟ್‌ (ಅಡ್ಮಿಟ್‌ ಕಾರ್ಡ್‌) ನಿಮ್ಮ ಕಂಪ್ಯೂಟರ್‌ ಪರೆದೆಯ ಮೇಲೆ ತೆರೆದುಕೊಳ್ಳುತ್ತದೆ.
  • ಅದನ್ನು ಡೌನ್‌ಲೋಡ್‌ ಮಾಡಿಕೊಳ್ಳಿ.
  • ಬಳಿಕ ಅದರ ಪ್ರಿಂಟ್‌ಔಟ್‌ ತೆಗೆದುಕೊಳ್ಳಿ.

ಹಾಲ್‌ ಟಿಕೆಟ್‌ನಲ್ಲಿ ಏನು ಗಮನಿಸಬೇಕು?

ಹಾಲ್‌ ಟಿಕೆಟ್‌ನಲ್ಲಿ ನಿಮ್ಮ ಹೆಸರು, ನೋಂದಣಿ ಸಂಖ್ಯೆಯನ್ನು ಪರಿಶೀಲಿಸಿ. ಅದರಲ್ಲಿರುವ ಪರೀಕ್ಷಾ ಮಾರ್ಗಸೂಚಿಗಳನ್ನು ಓದಿ. ಪರೀಕ್ಷೆಗೆ ಅಗತ್ಯವಿರುವ ದಾಖಲೆಗಳೇನು ಎಂಬುದನ್ನು ಪರಿಶೀಲಿಸಿ. ನಕಾರಾತ್ಮಕ ಅಂಕಗಳು ಎಷ್ಟು ಎಂಬುದನ್ನು ಪರೀಕ್ಷಿಸಿ. ಇದು ಉತ್ತರ ಬರೆಯುವಾಗ ಎಚ್ಚರಿಕೆಯಿಂದಿರಬೇಕು ಎಂಬುದನ್ನು ನೆನಪಿಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಹೆಚ್ಚಿನ ವಿವರಗಳಿಗಾಗಿ ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಇದನ್ನೂ ಓದಿ: ಪದವೀಧರರಿಗೆ ಕೆನರಾ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ

(How to download IBPS Clerk Prelims Admit Card 2025)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories