HPCL ನಿಂದ ಆಫೀಸರ್ ಲೆವಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 1 ಲಕ್ಷಕ್ಕೂ ಅಧಿಕ
HPCL Recruitment 2026: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಜೂನಿಯರ್ ಎಕ್ಸಿಕ್ಯುಟಿವ್ ಅಸಿಸ್ಟೆಂಟ್, ಜೂನಿಯರ್ ಎಕ್ಸಿಕ್ಯುಟಿವ್ HR ಮತ್ತು ಸಿವಿಲ್ ಎಂಜಿನಿಯರ್ ಸೇರಿದಂತೆ ಹಲವಾರು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.
ಈ ನೇಮಕಾತಿಯ ಮೂಲಕ HPCL ಒಟ್ಟು 731 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು HPCL ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಮಾರ್ಚ್ 25, 2026 ರ ಒಳಗೆ ಸೂಕ್ತ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ
HPCL ನ ಈ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿರ್ಧರಿಸಲಾಗಿದೆ. ಅಭ್ಯರ್ಥಿಗಳ ಗರಿಷ್ಠ ವಯಸ್ಸು ಹುದ್ದೆಗೆ ಅನುಗುಣವಾಗಿ 25, 27, 28, 29, 30, 33, 34, 36 ಮತ್ತು 45 ವರ್ಷಗಳಾಗಿವೆ.
ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ
ವಿದ್ಯಾರ್ಹತೆ
ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮತ್ತು ಇತರ ನಿಗದಿತ ಅರ್ಹತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ
HPCL ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸುವುದು ಕಡ್ಡಾಯವಾಗಿದೆ. ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು ₹1180 ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ: ರೈಲ್ವೆಯಿಂದ ಅತಿ ದೊಡ್ಡ ನೇಮಕಾತಿ: 11,127 ಲೊಕೊ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ?
- ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ HPCLನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ವೆಬ್‌ಸೈಟ್‌ನ ಹೋಮ್‌ಪೇಜ್‌ನಲ್ಲಿರುವ ಅಪ್ಲೈ ಲಿಂಕ್ ಮೇಲೆ ಕ್ಲಿಕ್ಕಿಸಿ.
- ಬಳಿಕ ಅಲ್ಲಿ ಕೇಳಿರುವ ಮಾಹಿತಿಗಳನ್ನು ಭರ್ತಿ ಮಾಡುವ ಮೂಲಕ ನಿಮ್ಮ ಹೆಸರು ನೋಂದಾಯಿಸಿಕೊಳ್ಳಿ.
- ಇದಾದನಂತರ ಉಳಿದ ಮಾಹಿತಿಗಳನ್ನು ಸಹ ತಪ್ಪಿಲ್ಲದೇ ತುಂಬಿ. ಕೊನೆಯಲ್ಲಿ ಅರ್ಜಿ ಶುಲ್ಕ ಪಾವತಿಸಿ.
- ಈಗ ಮತ್ತೊಮ್ಮೆ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಕೆಯ ಪ್ರತಿಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.



