(HPSC Recruitment 2022)ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ 53 ಉಪವಿಭಾಗೀಯ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹರಿಯಾಣದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 6 2022 ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
(HPSC Recruitment 2022)ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು:ಹರಿಯಾಣ ಸಾರ್ವಜನಿಕ ಸೇವಾ ಆಯೋಗ
ಹುದ್ದೆಯ ಹೆಸರು: ಉಪವಿಭಾಗೀಯ ಇಂಜಿನಿಯರ್
ಹುದ್ದೆಗಳ ಸಂಖ್ಯೆ:53
ಉದ್ಯೋಗ ಸ್ಥಳ: ಹರಿಯಾಣ
ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ವರ್ಗ ಸಂಖ್ಯೆಯ ವಿವರ:
General,Unreserved-29
SC -10
BC-A -05
BC-B- 03
EWS -06
ವಿದ್ಯಾರ್ಹತೆ ವಿವರ:
ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ:
ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ ವಿವರ:
ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಕನಿಷ್ಠ 21 ರಿಂದ ಗರಿಷ್ಠ42 ವಯಸ್ಸಿನವರಾಗಿರಬೇಕು.
ಇದನ್ನೂ ಓದಿ:Zilla Panchayat Recruitment 2022: ಮಹಿಳಾ ಕ್ಲೀನರ್ ಮತ್ತು ಸೆಕ್ಯುರಿಟಿ ಹುದ್ದೆಗೆ ಅರ್ಜಿ ಆಹ್ವಾನ
ಇದನ್ನೂ ಓದಿ:DC Office recruitment 2022 :58 ಲೋಡರ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿಶುಲ್ಕ ವಿವರ:
ಸಾಮಾನ್ಯ ವರ್ಗದ ಪುರುಷ ಅಭ್ಯರ್ಥಿಗಳು: ರೂ. 1000/-
ಸಾಮಾನ್ಯ ವರ್ಗದ ಮಹಿಳಾ ಅಭ್ಯರ್ಥಿಗಳು: ರೂ. 250/-
SC/BC-A/BC-B/ESM ವರ್ಗ: ರೂ. 250/-
ವಿಕಲಚೇತನರಿಗೆ- ಶುಲ್ಕವಿಲ್ಲ.
ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ:
ಹರಿಯಾಣ ಸಾರ್ವಜನಿಕ ಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)16-11-2022 ರಿಂದ6-12-2022 ರವರೆಗೆ ಹರಿಯಾಣ ಸಾರ್ವಜನಿಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ ಆದ www.hpsc.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:16 ನವೆಂಬರ್ 2022
ಆನ್‌ಲೈನ್ ಅರ್ಜಿ ಸಲ್ಲಿಸಲುಕೊನೆಯ ದಿನಾಂಕ :6ಡಿಸೆಂಬರ್ 2022
HPSC Recruitment 2022: Applications invited for the posts of Sub Divisional Engineer