ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ: 394 ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

IB JIO Recruitment 2025: ಗೃಹ ಸಚಿವಾಲಯದ ಗುಪ್ತಚರ ಬ್ಯೂರೋ ಸ್ವಲ್ಪ ದಿನಗಳ ಹಿಂದೆ 4987 ಭದ್ರತಾ ಸಹಾಯಕ ಮತ್ತು ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು.

ಇದೀಗ ಮತ್ತೊಮ್ಮೆ ಜೂನಿಯರ್‌ ಇನ್ವೆಸ್ಟಿಗೇಷನ್‌ ಆಫೀಸರ್‌ ಹುದ್ದೆಗಳಿಗಾಗಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸುವ ಮೂಲಕ ಬಂಪರ್‌ ಆಫರ್‌ನ್ನು ನೀಡುತ್ತದೆ.

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಐಬಿ, ಖಾಲಿ ಇರುವ 394 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಯುವಕರು ಆಗಸ್ಟ್‌ 23 ರಿಂದ ಸೆಪ್ಟೆಂಬರ್‌ 14 ಮಧ್ಯಾಹ್ನ 11:59 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗೃಹ ಸಚಿವಾಲಯದ ಅಧಿಕೃತ ವೆಬ್‌ ಸೈಟ್‌ಗೆ ಭೇಟಿ ನೀಡಿ, ಅಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸ ಬೇಕು.

IB JIO Recruitment 2025: ಹುದ್ದೆಗೆ ಸಂಬಂಧಿಸಿದ ವಿವರಗಳು

ಹುದ್ದೆಯ ಹೆಸರು

ಜೂನಿಯರ್‌ ಇಂಟೆಲಿಜನ್ಸ್‌ ಆಫೀಸರ್‌ ಗ್ರೇಡ್‌ – 2

ಒಟ್ಟು ಹುದ್ದೆಗಳು

394

ವಯೋಮಿತಿ

ಜೂನಿಯರ್‌ ಇಂಟೆಲಿಜನ್ಸ್‌ ಆಫೀಸರ್‌ ಗ್ರೇಡ್‌ – 2 ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 18 ರಿಂದ 27 ವರ್ಷಗಳ ಒಳಗೆ ಇರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಡಿಲಿಕೆಯಿರುತ್ತದೆ.

ಆಯ್ಕೆ ಪ್ರಕ್ರಿಯೆ

ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು 3 ಹಂತದ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ.

ಇದನ್ನೂ ಓದಿ: ಬಿಪಿಎಸ್‌ಸಿ 539 ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ

  1. ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ವಿದ್ಯುತ್‌ ಮತ್ತು ಎಲೆಕ್ಟ್ರಾನಿಕ್ಸ್ ಅಥವಾ ಐಟಿ / ಸಿಎಸ್ ಅಥವಾ ಸಿಎಸ್‌ಇ/ ಕಂಪ್ಯೂಟರ್ ಅಪ್ಲಿಕೇಶನ್ಸ್ ಕ್ಷೇತ್ರದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ. ಅಥವಾ
  2. ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ / ಕಂಪ್ಯೂಟರ್ ವಿಜ್ಞಾನ / ಭೌತಶಾಸ್ತ್ರ / ಗಣಿತದೊಂದಿಗೆ ವಿಜ್ಞಾನದಲ್ಲಿ ಪದವಿ. ಅಥವಾ
  3. ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಪದವಿ.

ಸಂಬಳ: 25500 ರೂ. – 81100 ರೂ.

ಅಧಿಸೂಚನೆ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

IB JIO Recruitment 2025: ಅರ್ಜಿ ಸಲ್ಲಿಕೆ ಹೇಗೆ?

– ಮೊದಲಿಗೆ ಇಂಟೆಲಿಜನ್ಸ್‌ ಬ್ಯೂರೋದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಡಿ.
– ಅಲ್ಲಿ ರೆಜಿಸ್ಟ್ರೇಷನ್‌ ವಿಂಡೋಗೆ ಹೋಗುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.
– ನಂತರ ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
– ನಿಮ್ಮ ಇತ್ತೀಚೆಗಿನ ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್‌ ಮಾಡಿ.
– ನಂತರ ಅರ್ಜಿ ಶುಲ್ಕವನ್ನು ಪಾವತಿಸಿ, ಅರ್ಜಿಯನ್ನು ಸಲ್ಲಿಸಿ.
– ಭವಿಷ್ಯದ ಉಲ್ಲೇಖಗಳಿಗಾಗಿ ಅರ್ಜಿ ನಮೂನೆಯ ಪ್ರತಿಯನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: ಪಂಜಾಬ್ ಮತ್ತು ಸಿಂಧ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ 750 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

(IB JIO Recruitment 2025 apply online for junior intelligence officer grade 2 within September 14)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories