ಗುಪ್ತಚರ ಸಂಸ್ಥೆಯಲ್ಲಿ ಟೆಕ್ ಗ್ರೇಡ್ II ನೇಮಕಾತಿ: ಎಂಜಿನಿಯರಿಂಗ್ ಪದವೀಧರರು ಇಂದೇ ಅರ್ಜಿ ಸಲ್ಲಿಸಿ
IB Technical Recruitment 2025: ಭಾರತ ದೇಶದ ಗುಪ್ತಚರ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೆ ಇದೊಂದು ಸುವರ್ಣಾವಕಾಶ.
ಗುಪ್ತಚರ ಬ್ಯೂರೋದಲ್ಲಿ ಎಸಿಐಓ ಗ್ರೇಡ್ 2– ಟೆಕ್ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಗೃಹ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.
ಈ ನೇಮಕಾತಿ ಅಭಿಯಾನದಲ್ಲಿ ಗುಪ್ತಚರ ಇಲಾಖೆಯು ಖಾಲಿ ಇರುವ ಒಟ್ಟು 258 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 16, 2025 ರ ಒಳಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆ ಮತ್ತು ಮಾನದಂಡಗಳನ್ನು ತಿಳಿಯೋಣ.
ಹುದ್ದೆಯ ಹೆಸರು ಮತ್ತು ವಿವಿರ
ಈ ನೇಮಕಾತಿ ಅಭಿಯಾನದಲ್ಲಿ ಖಾಲಿ ಇರುವ ಒಟ್ಟು 258 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಅದರಲ್ಲಿ 90 ಹುದ್ದೆಗಳು ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಉಳಿದ 168 ಹುದ್ದೆಗಳು ಇಲೆಕ್ಟ್ರಾನಿಕ್ಸ್ ಮತ್ತು ಸಂವಹನಕ್ಕೆ ಮೀಸಲಿಡಲಾಗಿವೆ.
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ ಗರಿಷ್ಠ ವಯಸ್ಸು 27 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಶೈಕ್ಷಣಿಕ ಅರ್ಹತೆ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ಇದನ್ನೂ ಓದಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಏಕಲವ್ಯ ಮಾದರಿ ವಸತಿ ಶಾಲೆಗೆ ಇಂದೇ ಅರ್ಜಿ ಸಲ್ಲಿಸಿ
ವೇತನ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 44,900 ರೂ ಗಳಿಂದ 1,42,400 ರೂ ವರೆಗೆ ವೇತನ ದೊರೆಯುತ್ತದೆ.
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡುವುದರ ಜೊತೆಗೆ, ಎಲ್ಲಾ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ 100 ರೂ. ಠೇವಣಿ ಇಡಬೇಕಾಗುತ್ತದೆ.
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಸೇರಿದಂತೆ 200 ರೂ. ಠೇವಣಿ ಇಡಬೇಕಾಗುತ್ತದೆ.
ಎಸ್‌ಸಿ, ಎಸ್‌ಟಿ, ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದ್ದು, ಕೇವಲ 100 ರೂ. ಪಾವತಿಸಬೇಕಾಗುತ್ತದೆ.
ಗುಪ್ತಚರ ಇಲಾಖೆ ಟಕ್ನಿಕಲ್ ಹುದ್ದೆಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.
ಅರ್ಜಿ ಸಲ್ಲಿಕೆ ಹೇಗೆ?
ಗುಪ್ತಚರ ಬ್ಯೂರೋ ಹೊರಡಿಸಿದ ಟೆಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ ಇಂಟೆಲಿಜೆನ್ಸ್ ಬ್ಯೂರೋದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
ಅಲ್ಲಿ ಹೊಸ ಪುಟದಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಬಳಿಕ, ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಬೇಕು.
ಇದಾದನಂತರ ನೀವು ಪಾವತಿಸಬೇಕಾದ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅಂತಿಮವಾಗಿ ಅರ್ಜಿಯನ್ನು ಇನ್ನೊಮ್ಮೆ ಪರಿಶೀಲಿಸಿ, ಸಲ್ಲಿಸಬೇಕು. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯನ್ನು ಪ್ರಿಂಟ್‌ಔಟ್ ತೆಗೆದುಕೊಳ್ಳಬೇಕು.
ಇದನ್ನೂ ಓದಿ: RBI Job: ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : RBIನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನ
(IB Technical Recruitment 2025 application invited for the post of ib acio officer grade 2 technical recruitment)



