ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) (IDBI Bank Recruitment 2023) ಖಾಲಿ ಇರುವ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ಫೆಬ್ರವರಿ 2023 ರ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.
ಐಡಿಬಿಐ (IDBI) ಬ್ಯಾಂಕ್ ಹುದ್ದೆಯ ಅಧಿಸೂಚನೆ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank)
ಹುದ್ದೆಗಳ ಸಂಖ್ಯೆ : 114 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ
ವೇತನ : ರೂ. 48,170 – 89,890/- ಪ್ರತಿ ತಿಂಗಳು
ಐಡಿಬಿಐ (IDBI) ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಮ್ಯಾನೇಜರ್ : 75 ಹುದ್ದೆಗಳು
ಸಹಾಯಕ ಜನರಲ್ ಮ್ಯಾನೇಜರ್ : 29 ಹುದ್ದೆಗಲು
ಉಪ ಪ್ರಧಾನ ವ್ಯವಸ್ಥಾಪಕರು : 10 ಹುದ್ದೆಗಳು
ಶೈಕ್ಷಣಿಕ ಅರ್ಹತೆ :
ಐಡಿಬಿಐ (IDBI) ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CSE/ IT/ ECE/ EEE, B.Sc, BCA, ME/ M.Tech ನಲ್ಲಿ CSE/ IT/ ECE/ EEE, M.Sc, MCA, MBA, MA, BE/ B.Tech ನಲ್ಲಿ ಉತ್ತೀರ್ಣರಾಗಿರಬೇಕು.
ಐಡಿಬಿಐ (IDBI) ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ಪ್ರತಿ ತಿಂಗಳಿಗೆ) ವಿವರ :
ವ್ಯವಸ್ಥಾಪಕ : ರೂ. 48,170 – 69,810/-
ಸಹಾಯಕ ಪ್ರಧಾನ ವ್ಯವಸ್ಥಾಪಕ : ರೂ. 63,840 – 78,230/-
ಉಪ ಪ್ರಧಾನ ವ್ಯವಸ್ಥಾಪಕರು : ರೂ. 76,010 – 89,890/-
ಐಡಿಬಿಐ (IDBI) ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :
- ಮ್ಯಾನೇಜರ್ : ಈ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನಿಷ್ಠ 25 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
- ಸಹಾಯಕ ಜನರಲ್ ಮ್ಯಾನೇಜರ್ : ಈ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
- ಉಪ ಜನರಲ್ ಮ್ಯಾನೇಜರ್ : ಈ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನಿಷ್ಠ 35 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು : 3 ವರ್ಷಗಳು
ಎಸ್‌ಸಿ/ ಎಸ್‌ಟಿ/ ಮಾಜಿ ಸೈನಿಕರು/ ಇಸಿಒ/ ಎಸ್‌ಎಸ್‌ಸಿಒ ಅಭ್ಯರ್ಥಿಗಳು : 5 ವರ್ಷಗಳು
ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು : ರೂ. 200/-
ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳು : ರೂ. 1000/-
ಪಾವತಿ ವಿಧಾನ:
ಐಡಿಬಿಐ (IDBI) ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:
ಐಡಿಬಿಐ (IDBI) ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : PDO Recruitment 2023 : ಪಿಡಿಒ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರಕಾರ
ಇದನ್ನೂ ಓದಿ : Bank of Baroda Recruitment 2023 : ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : Karnataka Bank Recruitment 2023 : ಕರ್ಣಾಟಕ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಮಾರ್ಚ್ 2023
IDBI Bank Recruitment 2023 : Application Invitation for Various Manager Posts