ಪದವೀಧರರಿಗೆ ಅಸಿಸ್ಟಂಟ್‌ ಮ್ಯಾನೇಜರ್‌ ಆಗುವ ಸುವರ್ಣಾವಕಾಶ: ಮಾರ್ಚ್‌ 19 ರೊಳಗೆ ಈ ಬ್ಯಾಂಕ್‌ಗೆ ಅರ್ಜಿ ಹಾಕಿ

IDBI Assistant Manager Vacancy: ಬ್ಯಾಂಕ್‌ ಉದ್ಯೋಗ ನಿಮ್ಮ ಕನಸಾಗಿದ್ದರೆ ಐಡಿಬಿಐ ನ ಅಸಿಸ್ಟಂಟ್‌ ಮ್ಯಾನೇಜರ್‌ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ.

IDBI Assistant Manager Vacancy: ಭಾರತೀಯ ಜೀವ ವಿಮಾ ನಿಗಮ ಮತ್ತು ಭಾರತ ಸರ್ಕಾರದ ಅಧೀನದಲ್ಲಿರುವ ವಾಣಿಜ್ಯ ಬ್ಯಾಂಕ್‌ ಆದ ಐಡಿಬಿಐ ಅಸಿಸ್ಟಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅಧಿಕೃತ ಘೋಷಣೆ ಹೊರಡಿಸಿದೆ. ಈ ನೇಮಕಾತಿ ಮೂಲಕ ಐಡಿಬಿಐ ಅಸಿಸ್ಟಂಟ್‌ ಮ್ಯಾನೇಜರ್‌ ಗಳನ್ನು ನೇಮಕ ಮಾಡಿಕೊಳ್ಳಲಿದೆ. ನೇಮಕಾತಿ ಪ್ರಕಟಣೆಯ ಪ್ರಕಾರ ಖಾಲಿ ಇರುವ 1,100 ಜೂನಿಯರ್‌ ಅಸಿಸ್ಟಂಟ್‌ ಮ್ಯಾನೇಜರ್‌ ಗ್ರೇಡ್‌ O ಮತ್ತು 200 ಅಸಿಸ್ಟಂಟ್‌ ಮ್ಯಾನೇಜರ್‌ ಗ್ರೇಡ್‌ A ಹುದ್ದೆಗಳು ಸೇರಿವೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಮಾರ್ಚ್‌ 8 ರಿಂದ ಪ್ರಾರಂಭವಾಗಲಿದೆ ಮತ್ತು ಅರ್ಜಿ ಸಲ್ಲಿಕೆಗೆ ಕಡೆಯ ದಿನ ಮಾರ್ಚ್‌ 19, 2026 ಆಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಎಂದು ನೋಡೋಣ.

ಹುದ್ದೆಗಳ ವಿವರ

ಅಸಿಸ್ಟಂಟ್‌ ಮ್ಯಾನೇಜರ್‌ ಗ್ರೇಡ್‌ ಎ – 200 ಹುದ್ದೆಗಳು

ಜೂನಿಯರ್‌ ಅಸಿಸ್ಟಂಟ್‌ ಮ್ಯಾನೇಜರ್‌ ಗ್ರೇಡ್‌ ಒ – 1100 ಹುದ್ದೆಗಳು

ಇದನ್ನೂ ಓದಿ: ಬಿಇ, ಬಿಟೆಕ್‌ ಪದವೀಧರರಿಗೆ ಸುವರ್ಣಾವಕಾಶ: ಸೆಂಟ್ರೆಲ್‌ ಬ್ಯಾಂಕ್‌ನಲ್ಲಿ 275 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು. ಜೊತೆಗೆ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್‌ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎಸ್‌ಸಿ ಮತ್ತು ಎಸ್‌ಟಿ ವರ್ಗದ ಅಭ್ಯರ್ಥಿಗಳು 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ

ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 25 ವರ್ಷಗಳು.

ವೇತನ ಎಷ್ಟು?

ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 6.14 ಲಕ್ಷದಿಂದ 6.50 ಲಕ್ಷ ರೂ. ಯ ವರೆಗೆ ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗೆ

ಈ ನೇಮಕಾತಿಯಲ್ಲಿ ಆಯ್ಕೆ ಪ್ರಕ್ರಿಯೆಯು 4 ಹಂತಗಳಲ್ಲಿರುತ್ತದೆ. ಆನ್‌ಲೈನ್‌ ಪರೀಕ್ಷೆ, ದಾಖಲೆ ಪರಿಶೀಲನೆ, ವೈಯಕ್ತಿಕ ಸಂದರ್ಶ ಮತ್ತು ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ.

ಅರ್ಜಿ ಸಲ್ಲಿಕೆ ಹೇಗೆ?

ಐಡಿಬಿಐ ಅಸಿಸ್ಟಂಟ್‌ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ idbi.bank.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Exit mobile version