ಐಡಿಬಿಐ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ ಅಧಿಸೂಚನೆ ಬಿಡುಗಡೆ : ವೇತನ 1 ಲಕ್ಷಕ್ಕೂ ಅಧಿಕ

IDBI Recruitment 2026: ಐಡಿಬಿಐ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಅಭಿಯಾನದಲ್ಲಿ ಬ್ಯಾಂಕ್‌ ಖಾಲಿ ಇರುವ ಒಟ್ಟು 31 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಓದಿ.

ಬ್ಯಾಂಕ್‌ ಉದ್ಯೋಗದ ಕನಸು ಹೊತ್ತು ಸಿದ್ಧತೆ ನಡೆಸುತ್ತಿರುವ ಯುವಜನರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಐಡಿಬಿಐ ಬ್ಯಾಂಕ್‌ (IDBI Recruitment 2026) ಖಾಲಿ ಇರುವ ಸ್ಪಷಲಿಸ್ಟ್‌ ಆಫೀಸರ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 14 (ನಾಳೆ) ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜುಲೈ 26, 2026 ಆಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂದು ನೋಡೋಣ.

ವಿದ್ಯಾರ್ಹತೆ

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ/ ಬಿ.ಇ./ಬಿ.ಟೆಕ್‌./ಎಂ.ಎ./ಎಂ.ಟೆಕ್‌./ಎಂ.ಎಸ್ಸಿ. ಪದವಿ ಪಡೆದಿರಬೇಕು.

ವಯೋಮಿತಿ

ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಯ ಕನಿಷ್ಠ ಮತ್ತು ಗರಿಷ್ಠ ವಯಸ್ಸು ನಿಗದಿಸಲಾಗಿದೆ. ಸುಮಾರು 25 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ.

ಐಡಿಬಿಐ ಎಸ್‌ಒ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

ನೇಮಕಾತಿ ವಿವರ

ಈ ನೇಮಕಾತಿ ಅಭಿಯಾನದ ಮೂಲಕ ಐಡಿಬಿಐ ಒಟ್ಟು 31 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ಆಡಿಟ್‌ ( Information System (IS)) – 10 ಹುದ್ದೆಗಳು

ಮೂಲಸೌಕರ್ಯ ನಿರ್ವಹಣಾ ಇಲಾಖೆ (ಐಎಂಡಿ) – 8 ಹುದ್ದೆಗಳು

ಕಾನೂನು – 9 ಹುದ್ದೆಗಳು

ಸೆಕ್ಯೂರಿಟಿ ಆಫೀಸರ್ – 4 ಹುದ್ದೆಗಳು

ಇದನ್ನೂ ಓದಿ: Agniveer Result 2026: ಅಗ್ನಿವೀರ್ ಫಲಿತಾಂಶ ಪ್ರಕಟ; ಮೆರಿಟ್ ಲಿಸ್ಟ್ PDF ಡೌನ್‌ಲೋಡ್ ಹೀಗೆ ಮಾಡಿ

ಅರ್ಜಿ ಪ್ರಕ್ರಿಯೆ ಮತ್ತು ಶುಲ್ಕ

ಐಡಿಬಿಐ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು idbi.bank.in/idbi-bank-careers-current-openings.aspx ಪೋರ್ಟಲ್‌ಗೆ ಭೇಟಿ ನೀಡಿ, ಅಲ್ಲಿ ಕೇಳಿರುವ ವಿವರಗಳನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದರ ಜೊತೆಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ₹1,050 ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಎಸ್‌ಸಿ, ಎಸ್‌ಟಿ ಮತ್ತು ಪಿಎಚ್ ವರ್ಗದ ಅಭ್ಯರ್ಥಿಗಳು ₹250 ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.