IIIT Recruitment : ಐಐಐಟಿ ಬೆಂಗಳೂರು ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

(IIIT Recruitment)ಇಂಟರ್‌ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT )ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಹುದ್ದೆಯ ವಿವರ, ಸ್ಥಳ, ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

(IIIT Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT )
ಹುದ್ದೆಯ ಹೆಸರು :ವಿದ್ಯಾರ್ಥಿಗಳ ಚಟುವಟಿಕೆಗಳ ಸಂಯೋಜಕರು (JRF)
ಉದ್ಯೋಗ ಸ್ಥಳ :ಬೆಂಗಳೂರು

ವಿದ್ಯಾರ್ಹತೆ ವಿವರ:
ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT ) ಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಪದವಿ ಮತ್ತು ಜೂನಿಯರ್ ರಿಸರ್ಚ್ ಫೆಲೋ (JRF) M.Sc ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT ) ಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 25ರಿಂದ ಗರಿಷ್ಠ35 ವರ್ಷ ವಯಸ್ಸಾಗಿರಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:ಶುಲ್ಕ ಇಲ್ಲ

ಅರ್ಜಿ ಸಲ್ಲಿಸುವ ವಿಧಾನ :
ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT ) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಲೊಂದಿಗೆ ( ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ, ಅರ್ಹತೆ, ಇತ್ಯಾದಿ ದಾಖಲೆ)12-11-2022 ರಿಂದ 30-11-2022ರವರೆಗೆ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT ) ಯ ಅಧಿಕೃತ ವೆಬ್‌ ಸೈಟ್‌ ಆದ iiitb.ac.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-ನವೆಂಬರ್- 2022
ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30- ನವೆಂಬರ್- 2022

ಇದನ್ನೂ ಓದಿ:Junior Veterinary Inspector Post :ಜೂನಿಯರ್ ವೆಟರ್ನರಿ ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಇದನ್ನೂ ಓದಿ:KSP Recruitment:ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3484 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:Manager Post Recruitment :ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಮ್ಯಾನೆಜರ್‌ ಹುದ್ದೆಗೆ ಅರ್ಜಿ ಆಹ್ವಾನ

ಸೂಚನೆ
ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT ) ಯ ಇಮೇಲ್‌ [email protected] ಇದಕ್ಕೆ ಅರ್ಜಿ ನಮೂನೆಗಳನ್ನು ಕಳುಹಿಸಬಹುದು.

ಇದನ್ನೂ ಓದಿ:NIMHANS Recruitment 2022 : ನಿಮ್ಹಾನ್ಸ್‌ನ ಕೌನ್ಸಿಲರ್ ಹಾಗೂ ಕನ್ಸಲ್ಟೆಂಟ್ ಸೈಕಿಯಾಟ್ರಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

IIIT Bangalore Recruitment: Applications invited for Graduates

Comments are closed.