ಆದಾಯ ತೆರಿಗೆ ಇಲಾಖೆಯು ಖಾಲಿ ಇರುವ ತೆರಿಗೆ ಸಹಾಯಕ, ಇನ್ಸ್ಪೆಕ್ಟರ್ ಹಾಗೂ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ (Income Tax Department Recruitment 2023) ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ಆದಾಯ ತೆರಿಗೆ ಇಲಾಖೆ (Income Tax Department)
ಪೋಸ್ಟ್‌ಗಳ ಸಂಖ್ಯೆ : 72 ಹುದ್ದೆಗಳು
ಹುದ್ದೆಯ ಹೆಸರು : ಸಹಾಯಕ, ಇನ್ಸ್ಪೆಕ್ಟರ್ ಹಾಗೂ ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ : ಭಾರತದಾದ್ಯಂತ
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :
- ಆದಾಯ ತೆರಿಗೆ ಇನ್ಸ್ಪೆಕ್ಟರ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿರಬೇಕು.
- ತೆರಿಗೆ ಸಹಾಯಕ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು.
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :
- ಆದಾಯ ತೆರಿಗೆ ಇನ್ಸ್ಪೆಕ್ಟರ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಹಾಗೆಯೇ ಗರಿಷ್ಠ 30ವರ್ಷ ವಯಸ್ಸು ಮೀರಿರಬಾರದು.
- ತೆರಿಗೆ ಸಹಾಯಕ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಹಾಗೆಯೇ ಗರಿಷ್ಠ 27ವರ್ಷ ವಯಸ್ಸು ಮೀರಿರಬಾರದು.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಹಾಗೆಯೇ ಗರಿಷ್ಠ 27ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ ವಿವರ :
- ಆದಾಯ ತೆರಿಗೆ ಇನ್ಸ್ಪೆಕ್ಟರ್ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 9300 ರಿಂದ 34800 ರೂ.ವರೆಗೆ ನಿಗದಿಪಡಿಸಲಾಗಿದೆ.
- ತೆರಿಗೆ ಸಹಾಯಕ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 5200 ರಿಂದ 20200 ರೂ.ವರೆಗೆ ನಿಗದಿಪಡಿಸಲಾಗಿದೆ.
- ಮಲ್ಟಿ ಟಾಸ್ಕಿಂಗ್ ಸ್ಟಾಫ್ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 5200 ರಿಂದ 20200 ರೂ.ವರೆಗೆ ನಿಗದಿಪಡಿಸಲಾಗಿದೆ.
ಇದನ್ನೂ ಓದಿ : ಕೃಷಿ ಇಲಾಖೆ ಹೊಸ ನೇಮಕಾತಿ 2023 : ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ
ಇದನ್ನೂ ಓದಿ : ಅಬಕಾರಿ ಇಲಾಖೆ ನೇಮಕಾತಿ 2023 : ಕಾನ್ಸ್ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ಬೆಂಗಳೂರು ರೈಲ್ವೆ ನೇಮಕಾತಿ : ಎಸ್‌ಎಸ್‌ಎಲ್‌ಸಿ ಪಾಸ್ ಆದವರಿಗೆ ಉದೋಗ್ಯಾವಕಾಶ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 6 ಫೆಬ್ರವರಿ 2023
Income Tax Department Recruitment 2023 : Application Invitation for Tax Assistant, Inspector and Various Posts