ಶನಿವಾರ, ಏಪ್ರಿಲ್ 26, 2025
Homejob Newsಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ -IPPB : ಪರೀಕ್ಷೆ ಇಲ್ಲದೇ ಉದ್ಯೋಗ, 30000 ರೂ. ವೇತನ

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ -IPPB : ಪರೀಕ್ಷೆ ಇಲ್ಲದೇ ಉದ್ಯೋಗ, 30000 ರೂ. ವೇತನ

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)ನಲ್ಲಿ ಸರಕಾರಿ ಉದ್ಯೋಗ ಪಡೆಯಲು ಅತ್ಯುತ್ತಮ ಅವಕಾಶವನ್ನು ಒದಗಿಸಿದೆ. ಸರಕಾರಿ ಉದ್ಯೋಗ ಪಡೆಯಲು ಯತ್ನಿಸುತ್ತಿರುವ ಅಭ್ಯರ್ಥಿಗಳು ippbonline.comಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

- Advertisement -

India Post Payment Bank Job : ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಪ್ರವೇಶ ಪರೀಕ್ಷೆಯಿಲ್ಲದೇ ಅಭ್ಯರ್ಥಿಗಳ ನೇಮಕಾತಿ ನಡೆಯಲಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳು 30000 ರೂಪಾಯಿ ವೇತನ ಪಡೆಯಲಿದ್ದಾರೆ.

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)ನಲ್ಲಿ ಸರಕಾರಿ ಉದ್ಯೋಗ ಪಡೆಯಲು ಅತ್ಯುತ್ತಮ ಅವಕಾಶವನ್ನು ಒದಗಿಸಿದೆ. ಸರಕಾರಿ ಉದ್ಯೋಗ ಪಡೆಯಲು ಯತ್ನಿಸುತ್ತಿರುವ ಅಭ್ಯರ್ಥಿಗಳು ippbonline.comಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

IPPB ಒಟ್ಟು 51 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಮಾರ್ಚ್ 21, 2025 ಕೊನೆಯ ದಿನವಾಗಿರಲಿದೆ. ಅಂತಿಮ ದಿನಾಂಕ್ಕಿಂತ ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಮಾತ್ರವೇ ಪರಿಗಣಿಸಲಾಗುತ್ತದೆ.

ನೀವು ಪದವೀಧರರಾಗಿರಬೇಕು. ಅರ್ಜಿದಾರರು 20 ರಿಂದ 35 ವಯಸ್ಸಿನವರಾಗಿರಬೇಖು. ಐಪಿಪಿಬಿ ( IPPB) ಯ ಅಧಿಸೂಚನೆಯ ಪ್ರಕಾರ, ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ; ಬದಲಾಗಿ, ಆಯ್ಕೆಯು ನಿಮ್ಮ ಪದವಿ ಅಂಕಗಳನ್ನು ಆಧರಿಸಿ ನಡೆಯಲಿದೆ.

Also Read : ಐಡಿಬಿಐ ಬ್ಯಾಂಕ್ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ನೇಮಕಾತಿ 2025: 650 ಹುದ್ದೆಗೆ ಅರ್ಜಿ ಆಹ್ವಾನ

ಅಂಕಗಳ ಆಧಾರದಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ. ಒಂದೊಮ್ಮೆ ನೀವು ಸಂದರ್ಶನದಲ್ಲಿ ಆಯ್ಕೆಯಾದ್ರೆ ಅಂತಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ನೀಡಲಾಗುತ್ತದೆ. ನೀವು ಅರ್ಹರು ಮತ್ತು ಆಸಕ್ತಿ ಹೊಂದಿದ್ದರೆ, ಅರ್ಜಿ ಸಲ್ಲಿಸಲು ippbonline.com ಭೇಟಿ ನೀಡಬಹುದಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಾಸ ಸ್ಥಳ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಅಲ್ಲದೇ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆರಂಭದಲ್ಲಿ ಒಂದು ವರ್ಷದ ಅವಧಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ. ನಂತರ ನಿಮ್ಮ ಕಾರ್ಯಕ್ಷಮತೆಯ ಆಧಾರದಲ್ಲಿ ವಾರ್ಷಿಕ ಮೂರು ವರ್ಷಗಳ ವರೆಗೂ ಕೂಡ ನವೀಕರಣ ಮಾಡಲಾಗುತ್ತದೆ.

Also Read : 10ನೇ ತರಗತಿ ಉತ್ತೀರ್ಣರಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ : 98,083 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂಪಾಯಿ ವೇತನ ಪಡೆಯಲಿದ್ದಾರೆ. ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ತೆರಿಗೆ ವಿನಾಯಿತಿಗಳೂ ಇವೆ. ಇದರ ಜೊತೆಗೆ, ಅಭ್ಯರ್ಥಿಗಳು ವಾರ್ಷಿಕ ವೇತನ ಹೆಚ್ಚಳ ಮತ್ತು ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಕಗಳನ್ನು ನಿರೀಕ್ಷಿಸಬಹುದು.

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ರೂ 150 ಪಾವತಿಸಬೇಕು, ಆದರೆ ಸಾಮಾನ್ಯ ವರ್ಗ ಸೇರಿದಂತೆ ಎಲ್ಲಾ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವಾಗಿ ರೂ 750 ಪಾವತಿಸಬೇಕು.

India Post Payment Bank Job without exam, salary Rs 30000 In Kannada News

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular