ಭಾರತೀಯ ಸೇನೆಯ ಅಗ್ನಿಶಾಮಕ, ಸಹಾಯಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಸಹಾಯಕ, ಅಗ್ನಿಶಾಮಕ ಮತ್ತು ಟ್ರೇಡಸ್ಮಾನ್‌ ಹುದ್ದೆಗಳ ನೇಮಕಾತಿ ಅರ್ಜಿಗಳನ್ನು (Indian Army Recruitment 2023) ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ತಿಳಿಸಿದ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಾಗಿದೆ.

ಭಾರತೀಯ ಸೇನೆ (AOC)ಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಭಾರತೀಯ ಸೇನೆ (AOC)
ಹುದ್ದೆಗಳ ಹೆಸರು : ಸಹಾಯಕ, ಅಗ್ನಿಶಾಮಕ ಮತ್ತು ಟ್ರೇಡಸ್ಮಾನ್‌
ಒಟ್ಟು ಹುದ್ದೆಗಳು : 1793 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌

ವಿದ್ಯಾರ್ಹತೆ ವಿವರ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ ಹಾಗೂ ಯಾವುದಾದರೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಹಾಗೂ ಅಭ್ಯರ್ಥಿಗಳು ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗುತ್ತದೆ. ಹಾಗೆಯೇ ಎಸ್‌ಸಿ ಅಥವಾ ಎಸ್‌ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ ಶ್ರೇಣಿ ವಿವರ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 5200 ರಿಂದ 20200 ವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಭಾರತೀಯ ಸೇನೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ದಕ್ಷತೆ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಎಲ್‌ಐಸಿ ನೇಮಕಾತಿ 2023: 8000 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ : ತಿಂಗಳಿಗೆ 1.40 ಲಕ್ಷ ಸಂಬಳ

ಇದನ್ನೂ ಓದಿ : Indian Navy Recruitment 2023: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ ಪ್ರಾರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಆರಂಭ ದಿನಾಂಕ : 28 ಜನವರಿ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 22 ಫೆಬ್ರವರಿ 2023

Indian Army Recruitment 2023 : Recruitment of Fireman, Assistant and various posts of Indian Army

Comments are closed.