ಎಲ್‌ಎಲ್‌ಬಿ ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: ಈ ದಿನದ ಒಳಗೆ ಅರ್ಜಿ ಹಾಕಿ

Indian Army Recruitment 2026: ಭಾರತೀಯ ಸೇನೆಯಲ್ಲಿ ಸೇರಿ ದೇಶ ಸೇವೆ ಮಾಡಬೇಕೆಂಬ ಕನಸು ಕಾಣುತ್ತಿರುವ ಯುವಕರಿಗೆ ಇದೊಂದು ಸುವರ್ಣಾವಕಾಶ. ಭಾರತೀಯ ಸೇನೆಯು JAG ಎಂಟ್ರಿ ಸ್ಕೀಮ್‌ 124 ನೇ ಕೋರ್ಸ್‌ ಅಕ್ಟೋಬರ್‌ 2026 (JAG Entry Scheme 124th Course) ರ ಸಲುವಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಇದರ ಪ್ರಕಾರ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಪ್ರಾರಂಭವಾಗಿದೆ. ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಅಥವಾ ಎಲ್‌ಎಲ್ಎಮ್‌ ಓದುತ್ತಿರುವ ಅಭ್ಯರ್ಥಿಗಳು ಫೆಬ್ರವರಿ 27 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ತೆರಳಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಅರ್ಜಿ ಯಾರು ಸಲ್ಲಿಸಬಹುದು?

ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 55% ಅಂಕಗಳೊಂದಿಗೆ ಎಲ್‌ಎಲ್‌ಬಿ ಪದವಿ ಪಡೆದಿರಬೇಕು. ಜೊತೆಗೆ CLAT PG 2025 ಸ್ಕೋರ್ ಕಾರ್ಡ್ ಹೊಂದಿರಬೇಕು ಮತ್ತು ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 21 ವರ್ಷಗಳು ಹಾಗೂ ಗಿರಷ್ಠ ವಯಸ್ಸು 27 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ಭಾರತೀಯ ಸೇನಾ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಅವರ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ ಮತ್ತು ಎಸ್‌ಎಸ್‌ಬಿ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಆಹ್ವಾನಿಸಲಾಗುತ್ತದೆ. ಯಶಸ್ವಿಯಾದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯಲ್ಲಿ ಇರಿಸಲಾಗುತ್ತದೆ. ನಂತರ ಖಾಲಿ ಹುದ್ದೆಗಳಿಗೆ ನೇಮಕಾತಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ: Income Tax Recruitment 2026 : ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ: ಜನವರಿ 31 ಕೊನೆಯ ದಿನ!

ಅರ್ಜಿ ಸಲ್ಲಿಕೆ ಹೇಗೆ?

– ಮೊದಲು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡಿ.

– ವೆಬ್‌ಸೈಟ್‌ನ ಮುಖಪುಟದಲ್ಲಿರುವ, ನೇಮಕಾತಿಗೆ ಸಂಬಂಧಿಸಿದ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

– ನಂತರ ನೋಂದಣಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.

– ಇದಾದ ಬಳಿಕ ಅಭ್ಯರ್ಥಿಯು ಇತರ ವಿವರಗಳನ್ನು ಭರ್ತಿ ಮಾಡಿ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.

– ಅಂತಿಮವಾಗಿ, ಸಂಪೂರ್ಣವಾಗಿ ಭರ್ತಿ ಮಾಡಿದ ನಮೂನೆಯ ಪ್ರಿಂಟ್‌ ತೆಗೆದುಕೊಳ್ಳಿ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories