ಎಂಜಿನಿಯರಿಂಗ್‌ ಪದವೀಧರರಿಗೆ ಗುಡ್‌ ನ್ಯೂಸ್‌: ಆರ್ಮಿ ಎಸ್‌ಎಸ್‌ಸಿ ಟೆಕ್ನಿಕಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ

Indian Army Recruitment 2026: ಭಾರತೀಯ ಸೇನೆಯು ಎಸ್‌ಎಸ್‌ಸಿ ಟೆಕ್ನಿಕಲ್ ಹುದ್ದೆ 67ನೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ ಭಾರತೀಯ ಸೇನೆಯು ಒಟ್ಟು 379 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಈ ನೇಮಕಾತಿಯಲ್ಲಿ ಪುರುಷ ಹಾಗೂ ಮಹಿಳೆ ಇಬ್ಬರೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜನವರಿ 7 ರಿಂದ (ನಿನ್ನೆಯಿಂದ) ಪ್ರಾರಂಭವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 5, 2026ರ ಒಳಗೆ ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳನ್ನು ಅಕ್ಟೋಬರ್‌ 2026ರಿಂದ ಪ್ರಾರಂಭವಾಗುವ 67ನೇ ಎಸ್‌ಎಸ್‌ಸಿ ಟೆಕ್ನಿಕಲ್‌ ಕೋರ್ಸ್‌ ಮೂಲಕ ಲೆಫ್ಟಿನೆಂಟ್‌ಗಳಾಗಿ ನಿಯೋಜಿಸಲಾಗುವುದು.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 27 ವರ್ಷಗಳು.

ಎಸ್‌ಎಸ್‌ಸಿ ಟೆಕ್ನಕಲ್‌ ಹುದ್ದೆ 67ನೇ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

ವಿದ್ಯಾರ್ಹತೆ

ಆರ್ಮಿ ಎಸ್‌ಎಸ್‌ಸಿ ಟೆಕ್ನಿಕಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿರಬೇಕು ಅಥವಾ ಅಂತಿಮ ವರ್ಷದಲ್ಲಿ ಎಂಜಿನಿಯರಿಂಗ್‌ ಪದವಿ ಓದುತ್ತಿರಬೇಕು.

ಇದನ್ನೂ ಓದಿ: ಎಸ್‌ಬಿಐ ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ

ಆಯ್ಕೆ ಹೇಗೆ?

ಈ ನೇಮಕಾತಿಯಲ್ಲಿ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

  • ಎಸ್‌ಎಸ್‌ಸಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಮೊದಲಿಗೆ ಅಧಿಕೃತ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡಿ.
  • ಈಗ ನೀವು ವೆಬ್‌ಸೈಟ್‌ನ ಮುಖಪುಟದಲ್ಲಿ ‘ಆಫೀಸರ್‌ಎಂಟ್ರಿ ಅರ್ಜಿ/ಲಾಗಿನ್’ ಮೇಲೆ ಕ್ಲಿಕ್ ಮಾಡಿ.
  • ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ನೀವು ‘ನೋಂದಣಿ’ ಮೇಲೆ ಕ್ಲಿಕ್ ಮಾಡಿ.
  • ಇದಾದ ನಂತರ ಅಧಿಕಾರಿಗಳ ಆಯ್ಕೆಯ ‘ಅರ್ಹತೆ’ ಪುಟ ತೆರೆಯುತ್ತದೆ.
  • ಅಲ್ಲಿ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಿ.
  • ಬಳಿಕ ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ಅಂತಿಮವಾಗಿ, ಫಾರ್ಮ್ ಅನ್ನು ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯ ಪ್ರಿಂಟ್‌ಔಟ್‌ ತೆಗೆದುಕೊಳ್ಳಿ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories