ಭಾರತೀಯ ಅಂಚೆ ಕಚೇರಿ ನೇಮಕಾತಿ 2023 : SSLC ಉತ್ತೀರ್ಣರಾದವರಿಗೆ ಸುವರ್ಣಾವಕಾಶ : 60,000 ರೂ. ವರೆಗೆ ವೇತನ

ಭಾರತೀಯ ಅಂಚೆ ಇಲಾಖೆ ನೇಮಕಾತಿ (Indian Post Office Recruitment 2023) ಅಧಿಕೃತ ಅಧಿಸೂಚನೆ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 19 ಸಾವಿರದಿಂದ 63 ಸಾವಿರದವರೆಗೆ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ವಿದ್ಯಾರ್ಹತೆ ವಿವರ :
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಮೇ 14, 2023 ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ 27 ವರ್ಷ ವಯಸ್ಸು ಮೀರಿರಬಾರದು. ಹೌದು, ಒಟ್ಟು ನಾಲ್ಕು ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 14 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆಯ್ಕೆ ಪ್ರಕ್ರಿಯೆ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಅಂಚೆ ಇಲಾಖೆ, ಆಡಳಿತ ವಿಭಾಗ, ನವದೆಹಲಿ – 110001 ಗೆ ಕಳುಹಿಸಬೇಕು.

ಭಾರತೀಯ ಅಂಚೆ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :

  • ಇಂಟರ್ನೆಟ್ ಬ್ರೌಸರ್‌ಗೆ ಹೋಗಿ ಮತ್ತು ನಂತರ indiapost.gov.in ಗೆ ಭೇಟಿ ನೀಡಬೇಕು.
  • ಅದರ ನಂತರ, ಅಭ್ಯರ್ಥಿಗಳು ನೇಮಕಾತಿ ಬಟನ್ ಅನ್ನು ಟ್ಯಾಪ್ ಮಾಡಬೇಕು ಮತ್ತು ನೋಂದಣಿಗಾಗಿ ಮುಂದೆ ಹೋಗಬೇಕು.
  • ನೀವು ಅರ್ಜಿ ಸಲ್ಲಿಸಲು ಬಯಸುವ ಖಾಲಿ ಹುದ್ದೆಯನ್ನು ಆಯ್ಕೆ ಮಾಡಿ ಮತ್ತು ನಂತರ ಭಾರತ ಪೋಸ್ಟ್ ನೇಮಕಾತಿ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭಿಸಬೇಕು.
  • ಅಗತ್ಯವಿರುವ ವಿವರಗಳನ್ನು ಪೂರ್ಣಗೊಳಿಸಿ ಮತ್ತು ನಂತರ ನಿಮ್ಮ ಸಹಿ, ಫೋಟೋ, ಮಾರ್ಕ್‌ಶೀಟ್‌ಗಳು ಇತ್ಯಾದಿಗಳನ್ನು ಅಪ್‌ಲೋಡ್ ಮಾಡಬೇಕು.
  • ಅರ್ಜಿ ನಮೂನೆಯನ್ನು ಸಲ್ಲಿಸಿ, ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ನಿಮ್ಮ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
  • ಫಾರ್ಮ್‌ನಲ್ಲಿ ನೀವು ನಮೂದಿಸಿದ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ನೀವು ಯಾವುದೇ ದೋಷವನ್ನು ಕಂಡುಕೊಂಡರೆ ತಕ್ಷಣವೇ ತಿದ್ದುಪಡಿ ಮಾಡಬೇಕು.
  • ಈ ಮಾರ್ಗಸೂಚಿಗಳನ್ನು ಬಳಸಿಕೊಂಡು, ನೀವು ಆನ್‌ಲೈನ್ ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ 2023 ಅನ್ನು ಅನ್ವಯಿಸಬಹುದು.

ಇದನ್ನೂ ಓದಿ : IIT Dharwad Recruitment 2023 : ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, ಸಂಬಳ ರೂ 35,000

ಅರ್ಜಿ ಶುಲ್ಕ :
ಇತರೆ ಹಿಂದುಳಿದ ವರ್ಗ : ರೂ 100/-
ಪರಿಶಿಷ್ಟ ಜಾತಿ : ರೂ 100/-
ಪರಿಶಿಷ್ಟ ಪಂಗಡ : ರೂ 100/-
PwD : ರೂ 100/-

Indian Post Office Recruitment 2023 : Golden Opportunity for SSLC Passers : Rs 60,000 Wages up to

Comments are closed.