ಐಟಿಐ, ಡಿಪ್ಲೊಮಾ ಆದವರಿಗೆ ಗುಡ್ ನ್ಯೂಸ್! IOCL ನಲ್ಲಿ 537 ಅಪ್ರೆಂಟಿಸ್ ಹುದ್ದೆ ನೇಮಕಾತಿ
IOCL Recruitment 2025: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪೈಪ್‌ಲೈನ್ ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಐಟಿಐ, ಡಿಪ್ಲೊಮಾ, ಪದವಿ ಮಾಡಿದ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಪ್ರದೇಶವಾರು ನಡೆಯುತ್ತಿದ್ದು ಸಂಬಂಧ ಪಟ್ಟ ಪ್ರದೇಶದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 537 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 18ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯಲ್ಲಿ ಅರ್ಜಿಯನ್ನು ಕೇವಲ ಆನ್‌ಲೈನ್ ನಲ್ಲಿ ಸಲ್ಲಿಸಬಹುದಾಗಿದೆ. ಐಒಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
IOCL Recruitment 2025: ನೇಮಕಾತಿ ವಿವರಗಳು
ಹುದ್ದೆಯ ಹೆಸರು
ಅಪ್ರೆಂಟಿಸ್ ಹುದ್ದೆಗಳು
ಹುದ್ದೆಯ ಸಂಖ್ಯೆ
537 ಹುದ್ದೆಗಳು
ಶೈಕ್ಷಣಿಕ ಅರ್ಹತೆ
ಐಒಸಿಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ನಂತರ ಐಟಿಐ ನಂತರ 2ನೇ ವರ್ಷದ ಡಿಪ್ಲೊಮಾ, ಪಿಯುಸಿ ನಂತರದ ಡಿಪ್ಲೊಮಾ/ಪೂರ್ಣ ಪ್ರಮಾಣದ ಪದವಿ ಹೊಂದಿರಬೇಕು.
ವಯೋಮಿತಿ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ; ವೇತನ 1 ಲಕ್ಷಕ್ಕಿಂತಲೂ ಅಧಿಕ
ಅರ್ಜಿ ಶುಲ್ಕ
ಐಒಸಿಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಎಲ್ಲಾ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ
ಈ ನೇಮಕಾತಿಯಲ್ಲಿ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಿದ್ಧಪಡಿಸಲಾಗುವ ಮೆರಿಟ್ ಲಿಸ್ಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುತ್ತದೆ. ಎಲ್ಲಾ ದಾಖಲೆಗಳು ಸರಿಯಾಗಿದ್ದರೆ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.
IOCL Recruitment 2025: ಅರ್ಜಿ ಸಲ್ಲಿಕೆ ಹೇಗೆ?
– ಐಒಸಿಎಲ್‌ನಲ್ಲಿ ಅರ್ಜಿ ಸಲ್ಲಿಸಲು ಮೊದಲಿಗೆ ಅಭ್ಯರ್ಥಿಗಳು ಐಒಸಿಎಲ್‌ನ ಅಧಿಕೃತ ವೆಬ್‌ಸೈಟ್ iocl.comಗೆ ಭೇಟಿ ನೀಡಿ.
– ಅಪ್ರೆಂಟಿಸ್ ರಿಕ್ರೂಟ್‌ಮೆಂಟ್ 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
– ಅಲ್ಲಿ ಕೇಳಿರುವ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.
– ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಮಾಹಿತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಇದನ್ನೂ ಓದಿ: PGCIL ನೇಮಕಾತಿ: 1543 ಫೀಲ್ಡ್ ಎಂಜಿನಿಯರ್, ಫೀಲ್ಡ್ ಸೂಪರ್‌ವೈಸರ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ
(IOCL Recruitment 2025 pipeline apprentice post big opportunity for ITI Diploma Student)



