ಇಸ್ರೋದಲ್ಲಿ ಸೈಂಟಿಸ್ಟ್‌ ಆಗುವ ಸುರ್ಣಾವಕಾಶ: 141 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ISRO SDSC SHAR Recruitment 2025: ಸೈಂಟಿಸ್ಟ್‌ ಆಗಬೇಕೆಂದು ಕನಸು ಕಂಡವರಿಗೆ ಗುಡ್‌ ನ್ಯೂಸ್! ಭಾರತ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ನೇಮಕಾತಿ ಅಧಿಸೂಚನೆಯನ್ನು ಘೋಷಿಸಿದೆ.

ಇಸ್ರೋ ಅಧೀನದಲ್ಲಿರುವ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ SHAR (SDSC SHAR), ಸೈಂಟಿಸ್ಟ್‌, ಎಂಜಿನಿಯರ್, ತಾಂತ್ರಿಕ ಸಹಾಯಕ, ಸೈಂಟಿಸ್ಟ್‌ ಅಸಿಸ್ಟೆಂಟ್‌ ಮತ್ತು ಲೈಬ್ರರಿ ಅಸಿಸ್ಟೆಂಟ್‌ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಕ್ಟೋಬರ್ 16 ರಿಂದ (ಇಂದಿನಿಂದ) ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಸರ್ಕಾರಿ ಉದ್ಯೋಗಗಳನ್ನು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಹತೆಯ ಆಧಾರದ ಮೇಲೆ ಸಂಬಂಧಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 141 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಯನ್ನು ನವೆಂಬರ್ 14, 2025 ರವರೆಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಬಿಇ, ಬಿಟೆಕ್, ಬಿಎಸ್ಸಿ, ಎಂಇ, ಎಂಟೆಕ್, ಎಂಎಸ್ಸಿ ಮತ್ತು ಇತರೆ ಅರ್ಹತೆಗಳನ್ನು ಹೊಂದಿರಬೇಕು.

ವಯೋಮಿತಿ

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು. ಗರಿಷ್ಠ ವಯಸ್ಸನ್ನು ಹುದ್ದೆಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ. ಅಭ್ಯರ್ಥಿಗಳು 25, 28, 30 ಮತ್ತು 35 ವರ್ಷ ವಯಸ್ಸಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಇದನ್ನೂ ಓದಿ: ಟೆರಿಟೋರಿಯಲ್‌ ಆರ್ಮಿ ನೇಮಕಾತಿ ರ್‍ಯಾಲಿ ವೇಳಾಪಟ್ಟಿ ಬಿಡುಗಡೆ: ಕರ್ನಾಟಕದಲ್ಲಿ ಯಾವಾಗ?

ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲಿಗೆ ಎಲ್ಲರೂ 750 ರೂ. ಅರ್ಜಿ ಶುಲ್ಕ ಭರಿಸಬೇಕಾಗಿದೆ. ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆದ ನಂತರ 750 ರೂ. ಪೂರ್ಣ ಮರುಪಾವತಿ ಸಿಗುತ್ತದೆ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ಕಡಿತಗೊಳಿಸಿದ ನಂತರ 500 ರೂ. ಮರುಪಾವತಿ ಮಾಡಲಾಗುತ್ತದೆ.

ಇಸ್ರೋದ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಕೆ ಹೇಗೆ?

  • ಇಸ್ರೋದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಮೊದಲು ಇಸ್ರೋದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ಬಳಿಕ, ವೆಬ್‌ಸೈಟ್ ನ ಮುಖಪುಟದಲ್ಲಿ ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  • ಈಗ ವೈಯಕ್ತಿಕ ಮಾಹಿತಿಯನ್ನು ನಮೂದಿಸುವ ಮೂಲಕ ನೋಂದಾಯಿಸಿಕೊಳ್ಳಬೇಕು.
  • ಇದಾದ ನಂತರ, ಶೈಕ್ಷಣಿಕ ಅರ್ಹತೆಯ ಮಾಹಿತಿ, ಪಾಸ್‌ಪೋರ್ಟ್ ಗಾತ್ರದ ಫೋಟೋ ನೀಡಬೇಕು. ನಂತರ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  • ಅಂತಿಮವಾಗಿ, ಫಾರ್ಮ್ ಅನ್ನು ಇನ್ನೊಮ್ಮೆ ಪರಿಶೀಲಿಸಿ ಸಲ್ಲಿಸಬೇಕು.
  • ಕೊನೆಯಲ್ಲಿ ಭವಿಷ್ಯದ ಉಲ್ಲೇಖಕ್ಕಾಗಿ ಅದರ ಮುದ್ರಣವನ್ನು ತೆಗೆದುಕೊಳ್ಳಬೇಕು.

ಇದನ್ನೂ ಓದಿ: ಉದ್ಯಾಕಾಂಕ್ಷಿಗಳಿಗೆ ಸಿಹಿಸುದ್ದಿ : ಫಾಕ್ಸ್ಕಾನ್ ಕಂಪನಿಯಿಂದ 14 ಸಾವಿರೆಕ್ಕೂ ಅಧಿಕ ಹುದ್ದೆಗಳಿಗೆ ಉದ್ಯೋಗಾವಕಾಶ

(ISO invites application for 141 different posts know the eligibility)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories