ಇಸ್ರೋ ಅಸಿಸ್ಟಂಟ್ ಮತ್ತು ಜೂನಿಯರ್ ಪರ್ಸನಲ್ ಅಸಿಸ್ಟಂಟ್ ನೇಮಕಾತಿ : ಪದವೀಧರರು ಈ ದಿನದಿಂದ ಅರ್ಜಿ ಸಲ್ಲಿಸಿ
ಇಸ್ರೋ ಅಸಿಸ್ಟಂಟ್ ಮತ್ತು ಜೂನಿಯರ್ ಪರ್ಸನಲ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಮೂಲಕ ಇಸ್ರೋ ಒಟ್ಟು 242 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊತ್ತ ಯುವ ಪದವೀಧರರಿಗೆ ಇಲ್ಲಿದೆ ಒಂದು ಒಳ್ಳೆಯ ಸುದ್ಧಿ. ಇಸ್ರೋ ಅಸಿಸ್ಟಂಟ್ ಮತ್ತು ಜೂನಿಯರ್ ಪರ್ಸನಲ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕಟಣೆಯ ಪ್ರಕಾರ ಅಭ್ಯರ್ಥಿಗಳು ಜುಲೈ 27 ರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಮೂಲಕ ಇಸ್ರೋ ಒಟ್ಟು 242 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 16, 2026 ಆಗಿದೆ. ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಇಸ್ರೋದ ಅಧಿಕೃತ ವೆಬ್‌ಸೈಟ್‌ಗೆ ತೆರಳಿ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಗಸ್ಟ್ 16, 2026 ಕ್ಕೆ 28 ವರ್ಷ ವಯಸ್ಸಿನವರಾಗಿರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಿದೆ.
ವಿದ್ಯಾರ್ಹತೆ
ಸಹಾಯಕ ಮತ್ತು ಜೂನಿಯರ್ ವೈಯಕ್ತಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು ಮತ್ತು ಕಂಪ್ಯೂಟರ್ ನಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಸಹ ಪಾವತಿಸಬೇಕು.
ವೇತನ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000 ರೂ. ವೇತನ ನೀಡಲಾಗುತ್ತದೆ.
ಇದನ್ನೂ ಓದಿ: ಐಡಿಬಿಐ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ ಅಧಿಸೂಚನೆ ಬಿಡುಗಡೆ : ವೇತನ 1 ಲಕ್ಷಕ್ಕೂ ಅಧಿಕ
ಅರ್ಜಿ ಸಲ್ಲಿಕೆ ಹೇಗೆ?
- ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೊದಲಿಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
- ವೆಬ್‌ಸೈಟ್‌ನ ಮುಖಪುಟದಲ್ಲಿರುವ ರೆಜಿಸ್ಟ್ರೇಷನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಬಳಿಕ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ, ನೋಂದಣಿ ಶುಲ್ಕವನ್ನು ಪಾವತಿಸಿ.
- ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅದರ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಂತರ ಎಲ್ಲವನ್ನು ಸರಿಯಾಗಿ ಇನ್ನೊಮ್ಮೆ ಪರಿಶೀಲಿಸಿ, ಅರ್ಜಿ ಸಲ್ಲಿಸಿ.
- ಕೊನೆಯದಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಅದರ ಪ್ರಿಂಟ್ ತೆಗೆದುಕೊಳ್ಳಿ.

