ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ, 1 ಲಕ್ಷಕ್ಕೂ ಅಧಿಕ ವೇತನ

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ (Karnataka Commercial Tax Department) ಅಧಿಕೃತ ಅಧಿಸೂಚನೆ ಮೂಲಕ 477 ವಾಣಿಜ್ಯ ತೆರಿಗೆಗಳ ಇನ್ಸ್‌ಪೆಕ್ಟರ್, ವಾಣಿಜ್ಯ ತೆರಿಗೆ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಲಿದ್ದು, ಅದನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ
ಹುದ್ದೆಗಳ ಸಂಖ್ಯೆ : 477 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ವಾಣಿಜ್ಯ ತೆರಿಗೆಗಳ ಇನ್ಸ್‌ಪೆಕ್ಟರ್, ವಾಣಿಜ್ಯ ತೆರಿಗೆ ಅಧಿಕಾರಿ
ವೇತನ: ರೂ.27650-109600/- ಪ್ರತಿ ತಿಂಗಳು

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು : 9 ಹುದ್ದೆಗಳು
  • ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು : 35 ಹುದ್ದೆಗಳು
  • ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು : 86 ಹುದ್ದೆಗಳು
  • ವಾಣಿಜ್ಯ ತೆರಿಗೆ ಅಧಿಕಾರಿ : 97 ಹುದ್ದೆಗಳು
  • ವಾಣಿಜ್ಯ ತೆರಿಗೆಗಳ ಇನ್ಸ್ಪೆಕ್ಟರ್ : 150 ಹುದ್ದೆಗಳು
  • ಮೊದಲ ವಿಭಾಗದ ಸಹಾಯಕ (FDA) : 100 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ :
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಬಳ (ತಿಂಗಳಿಗೆ)ದ ವಿವರ :

  • ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು : ರೂ.74400-109600/-
  • ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು : ರೂ.67550-104600/-
  • ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು : ರೂ.52650-97100/-
  • ವಾಣಿಜ್ಯ ತೆರಿಗೆ ಅಧಿಕಾರಿ : ರೂ.43100-83900/-
  • ವಾಣಿಜ್ಯ ತೆರಿಗೆಗಳ ನಿರೀಕ್ಷಕರು : ರೂ.33450-62600/-
  • ಮೊದಲ ವಿಭಾಗದ ಸಹಾಯಕ (FDA) : ರೂ.27650-52650/-

ಇದನ್ನೂ ಓದಿ : ಭಾರತೀಯ ಅಂಚೆ ಇಲಾಖೆಯಲ್ಲಿ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಬೆಂಗಳೂರು ನಿಮ್ಹಾನ್ಸ್‌ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ, 40000 ರೂ. ವರೆಗೆ ವೇತನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ

Job opportunity in Karnataka Commercial Tax Department, salary more than 1 lakh

Comments are closed.