ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಖಾಲಿ ಇರುವ (ಅಸಿಸ್ಟೆಂಟ್ ಕಮಾಂಡಂಟ್) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಆದೇಶ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಅಡಿಯಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಇಲಾಖೆ 209 ಖಾಲಿ ಇರುವ ಅಸಿಸ್ಟೆಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಬಯಸುವವರು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸ್ ಆಗಿರಬೇಕು. ಮತ್ತು ಅಧಿಕೃತ ದಾಖಲೆಯನ್ನು ಹೊಂದಿರಬೇಕು.

ವಯೋಮಿತಿ:
ಆಸಕ್ತ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 20 ವರ್ಷ, ಗರಿಷ್ಠ 25 ವರ್ಷಕ್ಕೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರ ನಿಯಮಾವಳಿ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು ರೂ. 200 ಅರ್ಜಿ ಶುಲ್ಕ ಪಾವತಿಸಬೇಕು. ಎಸ್ಸಿ/ಎಸ್ಟಿ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಎಸ್ಬಿಐ ಬ್ಯಾಂಕ್ , ನೆಟ್ಬ್ಯಾಂಕಿಂಗ್, ಅಥವಾ ಆನ್ಲೈನ್ ಪೇಮೆಂಟ್ ಮೋಡ್ನಲ್ಲಿ ಪಾವತಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.09.2020
ಅರ್ಜಿ ಹಿಂಪಡೆಯಲು ಕೊನ ದಿನಾಂಕ: 14ರಿಂದ 29.2020
ಆನ್ಲೈನ್ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 07.09.2020
ಲಿಖಿತ ಪರೀಕ್ಷೆ: 20.12.2020