Indian Bank Jobs: ಇಂಡಿಯನ್‌ ಬ್ಯಾಂಕ್‌ 1500 ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಲು ಆಗಸ್ಟ್‌ 7 ಕೊನೆ ದಿನ

Indian Bank Jobs: ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಯುವಕರಿಗೆ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಒಂದು ಸುವರ್ಣಾವಕಾಶ ಒದಗಿ ಬಂದಿದೆ.

ಅದೇನೆಂದರೆ ಇಂಡಿಯನ್‌ ಬ್ಯಾಂಕ್‌ 1500 ಅಪ್ರೆಂಟಿಸ್‌ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕಿಂಗ್‌ ವಲಯದಲ್ಲಿ ಕೆಲಸ ಮಾಡಬೇಕೆಂಬ ಆಕಾಂಕ್ಷೆಯನ್ನು ಇಟ್ಟುಕೊಂಡ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಇಂಡಿಯನ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆಗಳೇನು ಎಂದು ತಿಳಿದುಕೊಳ್ಳೋಣ.

ಹುದ್ದೆಯ ಹೆಸರು ಏನು : ಅಪ್ರೆಂಟಿಸ್‌

ಈ ಹುದ್ದೆಗೆ ಯಾರು ಅರ್ಜಿ ಸಲ್ಲಿಸಬಹುದು? ಪದವಿ ಶಿಕ್ಷಣ ಪೂರೈಸಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ ಎಷ್ಟು? ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಭರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷಗಳು. ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಸ್ಟೈಫಂಡ್ ಎಷ್ಟು? ಗ್ರಾಮೀಣ ಶಾಖೆಗೆ 12,000 ರೂ. ಮತ್ತು ನಗರ ಶಾಖೆಗೆ 15,000 ರೂ.ಗಳು.

ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್: 800 ರೂ.
ಎಸ್‌ಸಿ/ಎಸ್‌ಟಿ/ದಿವ್ಯಾಂಗ: 175 ರೂ.

ಆಯ್ಕೆ ಹೇಗೆ ನಡೆಯುತ್ತದೆ?
ಈ ಹುದ್ದೆಗೆ ಮೊದಲು ಆನ್‌ಲೈನ್‌ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯಲ್ಲೂ ಉತ್ತೀರ್ಣರಾಗಬೇಕಾಗುತ್ತದೆ.

ಪರೀಕ್ಷೆಯ ಮಾದರಿ ಹೇಗಿರುತ್ತದೆ?
ಅಪ್ರೆಂಟಿಸ್‌ ಹುದ್ದೆಗೆ ನಡೆಸುವ ಪರೀಕೆಯಲ್ಲಿ ಗರಿಷ್ಠ ಅಂಕಗಳು 100. ಇದರಲ್ಲಿ ತಾರ್ಕಿಕ ಸಾಮರ್ಥ್ಯದಿಂದ 15 ಪ್ರಶ್ನೆಗಳು (15 ಅಂಕಗಳು), ಕಂಪ್ಯೂಟರ್ ಜ್ಞಾನದಿಂದ 10 ಪ್ರಶ್ನೆಗಳು (10 ಅಂಕಗಳು), ಇಂಗ್ಲಿಷ್ ಭಾಷೆಯಿಂದ 25 ಪ್ರಶ್ನೆಗಳು (25 ಅಂಕಗಳು), ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ 25 ಪ್ರಶ್ನೆಗಳು (25 ಅಂಕಗಳು) ಮತ್ತು ಸಾಮಾನ್ಯ ಜ್ಞಾನ (ವಿಶೇಷವಾಗಿ ಬ್ಯಾಂಕಿಂಗ್ ಉದ್ಯಮಕ್ಕೆ ಸಂಬಂಧಿಸಿದ) 25 ಪ್ರಶ್ನೆಗಳು (25 ಅಂಕಗಳು) ಒಳಗೊಂಡಿರುತ್ತವೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. 

ರಾಜ್ಯವಾರು ಅಪ್ರೆಂಟಿಸ್‌ ತರಬೇತಿಗಾಗಿ ಖಾಲಿ ಇರುವ ಹುದ್ದೆಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಇಂಡಿಯನ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ indianbank.in ಗೆ ಭೇಟಿ ಕೊಡಿ.
ಮುಖಪುಟದಲ್ಲಿರುವ ವೃತ್ತಿ (Career) ಆಯ್ಕೆಯ ಮೇಲೆ ಕ್ಲಿಕ್ಕಿಸಿ.
ಅಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗಿರುವ ನೇಮಕಾತಿ ಪ್ರಕಟಣೆಯ ಮೇಲೆ ಕ್ಲಿಕ್ಕಿಸಿ ರಜಿಸ್ಟರ್‌ ಮಾಡಿ.
ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ.
ಎಲ್ಲಾ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಮತ್ತು ಶುಲ್ಕವನ್ನು ಪಾವತಿಸಿ.
ಫಾರ್ಮ್‌ ಅನ್ನು ಸಲ್ಲಿಸಿದ ನಂತರ ಭವಿಷ್ಯದ ಉಪಯೋಗಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.‌
ಹೆಚ್ಚಿನ ವಿವರಗಳಿಗಾಗಿ ಈ ಅಧಿಸೂಚನೆಯನ್ನು ಪರಿಶೀಲಿಸಿ.

Jobs Indian bank has been issued for the recruitment of 1500 Apprentice posts in Kannada

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories