ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಉಳಿದಿರುವ 323 ಸಮುದಾಯ ಆರೋಗ್ಯಾಧಿಕಾರಿಗಳ ಹುದ್ದೆಯ ನೇಮಕಾತಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 18 ರ ವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒಳಪಟ್ಟಿರುವ ಹೆಲ್ತ್ ಆಂಡ್ ವೆಲ್‌ನೆಸ್ ಸೆಂಟರ್, ಎನ್.ಎಚ್.ಎಂ ಯೋಜನೆಯ ಅಡಿ ಯಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಒಟ್ಟು 323 ಸಮುದಾಯ ಆರೋಗ್ಯಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ.
ವಿದ್ಯಾರ್ಹತೆ :
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್ ಅಥವಾ ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ (ಕೆಎನ್‌ಸಿ ಅಥವಾ ಐಎನ್‌ಸಿ ) ಯಿಂದ ನೋಂದಣಿಯಾಗಿರಬೇಕು. ಅಭ್ಯರ್ಥಿಗಳು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವಿಣ್ಯತೆಯನ್ನು ಹೊಂದಿರಬೇಕು.
ವಯೋಮಿತಿ :
ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಎಸ್.ಸಿ/ಎಸ್.ಟಿ/ಪ್ರ.ವರ್ಗ -1/ ಮಾಜಿ ಸೈನಿಕರು 40 ವರ್ಷ ಹಾಗೂ 2ಎ/2ಬಿ/ 3ಬಿ ಹಾಗೂ ಇತರೆ ಹಿಂದುಳಿದ ವರ್ಗ (ರಾಜ್ಯ ) 38 ವರ್ಷ.
ಇತರೆ ಅರ್ಹತೆ : 10 ವರ್ಷ ವಾಸ್ತವ್ಯವನ್ನು ಹೊಂದಿರಲೇ ಬೇಕು. ಅಲ್ಲದೇ ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಒಂದು ಮಾಧ್ಯಮವಾಗಿ ಕಲಿತಿರಬೇಕು.
ವೇತನ :
ಸಮುದಾಯ ಆರೋಗ್ಯಾಧಿಕಾರಿಗಳ ಹುದ್ದೆಗೆ ನೇಮಕವಾಗುವ ಅಭ್ಯರ್ಥಿಗಳಿಗೆ 22,000 ರೂ. ವೇತನ. ಜೊತೆಗೆ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ 8000 ರೂ. ವರೆಗೆ ನೀಡಲಾಗುತ್ತದೆ.
ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಕೊನೆಯ ದಿನ : 18-10-2021
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ : 23-10-2021
ಮೂಲ ದಾಖಲೆಗಳ ಪರಿಶೀಲನೆ : 26-10-2021
ಹೆಚ್ಚಿನ ಮಾಹಿತಿಗಾಗಿ : https://karunadu.karnataka.gov.in ಸಂರ್ಪಕಿಸಬಹುದಾಗಿದೆ.
ಇದನ್ನೂ ಓದಿ : ಪದವೀಧರರಿಗೆ ಎಸ್‌ಬಿಐನಲ್ಲಿದೆ 2,056 ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ : JOB ಹುಡುಕುತ್ತಿದ್ದೀರಾ ? ಹಾಗಾದ್ರೇ ಇದನ್ನ ಒಮ್ಮೇ ಟ್ರೈ ಮಾಡಿ : ‘ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್’ ನೇಮಕಾತಿಗಾಗಿ ಅರ್ಜಿ ಆಹ್ವಾನ
(Jobs to apply for the post of CHO POST Mangalore )