ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ (KARBWWB Recruitment 2023) ಜೂನ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ SDA, ಫೀಲ್ಡ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KARBWWB)
ಹುದ್ದೆಗಳ ಸಂಖ್ಯೆ : 186 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : SDA, ಫೀಲ್ಡ್ ಇನ್ಸ್‌ಪೆಕ್ಟರ್‌ಗಳು
ವೇತನ : ರೂ.21400-70850/- ಪ್ರತಿ ತಿಂಗಳು
KARBWWB ನೇಮಕಾತಿ ಹುದ್ದೆಗಳ ಹುದ್ದೆವಾರು ವಿವರ :
ಕಲ್ಯಾಣ ಅಧಿಕಾರಿ : 12 ಹುದ್ದೆಗಳು
ಕ್ಷೇತ್ರ ನಿರೀಕ್ಷಕರು : 60 ಹುದ್ದೆಗಳು
ಮೊದಲ ವಿಭಾಗದ ಸಹಾಯಕ (FDA) : 12 ಹುದ್ದೆಗಳು
ಖಾಸಗಿ ಸಲಹೆಗಾರ : 2 ಹುದ್ದೆಗಳು
ಎರಡನೇ ವಿಭಾಗದ ಸಹಾಯಕ (SDA) : 100 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ:
ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಅನುಸಾರವಾಗಿ ವಿದ್ಯಾರ್ಹತೆ ಹಾಗೂ ವಯೋಮಿತಿಯನ್ನು KARBWWB ನಿಯಮಗಳ ಪ್ರಕಾರ ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಕೂಡ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
KARBWWB ನೇಮಕಾತಿ ಹುದ್ದೆಗಳ ಹುದ್ದೆವಾರು ಸಂಬಳದ ವಿವರ (ತಿಂಗಳಿಗೆ) :
ಕಲ್ಯಾಣ ಅಧಿಕಾರಿ : ರೂ.37900-70850/-
ಕ್ಷೇತ್ರ ನಿರೀಕ್ಷಕರು : ರೂ.33450-62600/-
ಮೊದಲ ವಿಭಾಗದ ಸಹಾಯಕ (FDA) : ರೂ.27650-52650/-
ಖಾಸಗಿ ಸಲಹೆಗಾರ : ರೂ.27650-52650/-
ಎರಡನೇ ವಿಭಾಗದ ಸಹಾಯಕ (SDA) : ರೂ.21400-42000/-
ಇದನ್ನೂ ಓದಿ : BSF Recruitment 2023 : ಗಡಿ ಭದ್ರತಾ ಪಡೆ : ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23 ಜೂನ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಜುಲೈ 2023
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 25 ಜುಲೈ 2023
ಇ-ಪೋಸ್ಟ್ ಆಫೀಸ್‌ಗಳ ಮೂಲಕ ಶುಲ್ಕವನ್ನು ಪಾವತಿಸಲು ದಿನಾಂಕ : 26 ಜೂನ್ 2023
KARBWWB Recruitment 2023 : Job Vacancy in Karnataka Building Workers Welfare Board, Rs 70 thousand, Salary