ಕರ್ನಾಟಕ ಹೈಕೋರ್ಟ್‌ ನೇಮಕಾತಿ 2023 : ಕ್ಲರ್ಕ್‌ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್‌ನಿಂದ ಹೊಸ ನೇಮಕಾತಿಯೊಂದನ್ನು (Karnataka High Court Recruitment 2023) ಹೊರಡಿಸಲಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ 13 ಕಾನೂನು ಗುಮಾಸ್ತ ಮತ್ತು ಸಂಶೋಧನಾ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಕರ್ನಾಟಕ ಹೈಕೋರ್ಟ್ ಹುದ್ದೆಯ ಅಧಿಸೂಚನೆ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಹೈಕೋರ್ಟ್ (Karnataka High Court)
ಹುದ್ದೆಗಳ ಸಂಖ್ಯೆ: 13 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು: ಕಾನೂನು ಗುಮಾಸ್ತ ಮತ್ತು ಸಂಶೋಧನಾ ಸಹಾಯಕ
ವೇತನ : ರೂ.25000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಹೈಕೋರ್ಟ್‌ನಿಂದ ಹೊಸ ನೇಮಕಾತಿಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಶೆ. 50ರಷ್ಟು ಅಂಕಗಳೊಂದಿಗೆ ಕಾನೂನಿನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ಅನುಭವ ಹೊಂದಿರಬೇಕು. ಹಾಗೆಯೇ ಕಂಪ್ಯೂಟರ್‌ನಲ್ಲಿ ಸಾಮಾನ್ಯ ಜ್ಞಾನ ಹೊಂದಿರಬೇಕು.

ವಯೋಮಿತಿ ವಿವರ :
ಕರ್ನಾಟಕ ಹೈಕೋರ್ಟ್‌ನಿಂದ ಹೊಸ ನೇಮಕಾತಿಯ ಪ್ರಕಾರ, ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯೋಮಿತಿಯನ್ನು ಕರ್ನಾಟಕ ಹೈಕೋರ್ಟ್‌ನ ನಿಯಮಾವಳಿಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಕರ್ನಾಟಕ ಹೈಕೋರ್ಟ್‌ನಿಂದ ಹೊಸ ನೇಮಕಾತಿಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಹೈಕೋರ್ಟ್‌ನಿಂದ ಹೊಸ ನೇಮಕಾತಿಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಶೈಕ್ಷಣಿಕ ದಾಖಲೆಗಳು, ಸಾಧನೆಗಳು/ಪ್ರಮಾಣೀಕರಣಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಫೆಬ್ರವರಿ 2023

ಇದನ್ನೂ ಓದಿ : SSLR Karnataka Recruitment 2023 : 2000 ಸರ್ವೇಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ : ವಿವಿಧ ಹುದ್ದೆಗಳ ನೇಮಕಾತಿ

ಇದನ್ನೂ ಓದಿ : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೂಚನೆ : ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಆದ karnatakajudiciary.kar.nic.in ಮೂಲಕ ತಿಳಿದುಕೊಳ್ಳಬಹುದಾಗಿದೆ.

Karnataka High Court Recruitment 2023: Applications invited for the post of Clerk and Assistant

Comments are closed.