Karnataka Jobs : KEA ನೇಮಕಾತಿ 2023: ಆಹಾರ ಇಲಾಖೆಯಲ್ಲಿ 670 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2023) ವಿವಿಧ ಸರಕಾರಿ ಸಂಸ್ಥೆಗಳಲ್ಲಿ (Karnataka Jobs) ಖಾಲಿ ಇರುವ 670 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಮತ್ತು ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್‌ 10,2023 ಕೊನೆಯ ದಿನಾಂಕ ಆಗಿದೆ. ಇನ್ನೂ ಅರ್ಜಿ ಸಲ್ಲಿಸದ ಮತ್ತು ಅರ್ಜಿ ಶುಲ್ಕವನ್ನು ಪಾವತಿಸದ ಅಭ್ಯರ್ಥಿಗಳು ಈ ಪಾವತಿ ಸೌಲಭ್ಯವನ್ನು ಹೊಂದಿರುವ ಅಂಚೆ ಕಚೇರಿಗಳಲ್ಲಿ ಆಗಸ್ಟ್‌ 18,2023 ರವರೆಗೆ ಅರ್ಜಿ ಶುಲ್ಕವನ್ನು ಪಾವತಿಸಬಹುದು. ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳನ್ನು ಕೆಳಗೆ ನೀಡಲಾಗಿದೆ

KEA Recruitment 2023 : ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ:

  • ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,
  • ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ,
  • ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು
  • ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಬೆಂಗಳೂರು,

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ ನೇಮಕಾತಿ 2023) ಮೇಲಿನ ಸಂಸ್ಥೆಗಳಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ಗುಂಪಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್‌ 18, 2023 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರವು ವಿವಿಧ 4 ಇಲಾಖೆಗಳಲ್ಲಿ ಒಟ್ಟು 670 ಖಾಲಿ ಹುದ್ದೆಗಳಿಗೆ ಸಂಕ್ಷಿಪ್ತ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ನೇಮಕಾತಿ ಮೂಲಕ ಕರ್ನಾಟಕದ ಕೆಳಗಿನ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಇದನ್ನೂ ಓದಿ : UPSC Recruitment 2023 : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಕಂಡ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

Karnataka Jobs : KEA Recruitment 2023: Applications invited for 670 posts in Food Department

Comments are closed.