Karnataka Police Recruitment 2022: ಕರ್ನಾಟಕ ಪೊಲೀಸ್ ನೇಮಕಾತಿ 2022: ಶೀಘ್ರದಲ್ಲೇ 5000 ಪೊಲೀಸ್ ಹುದ್ದೆಗಳಿಗೆ ಅಧಿಸೂಚನೆ

ಬೆಂಗಳೂರು: (Karnataka Police Recruitment 2022) ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುಡ್ ನ್ಯೂಸ್ ಕೊಟ್ಟಿದ್ದಾರೆ, ರಾಜ್ಯದಲ್ಲಿ ಶಾಂತಿ ಕಾಪಾಡಲು ಪೊಲೀಸರ ಅವಶ್ಯಕತೆ ಇದೆ. ಹಾಗಾಗಿ ರಾಜ್ಯದಲ್ಲಿ ಶೀಘ್ರದಲ್ಲೇ 5 ಸಾವಿರ ಪೊಲೀಸ್‌ ಹುದ್ದೆಗೆ ಪೊಲೀಸ್ ನೇಮಕಾತಿ 2022 (Karnataka Police Recruitment 2022) ಶೀಘ್ರದಲ್ಲೇ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಕೆಜಿಎಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶ್ವಾನ ದಳ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕೆಜಿಎಫ್ ಪೊಲೀಸರ ಪರಂಪರೆಗೆ ಶ್ರೀಮಂತ ಇತಿಹಾಸವಿದೆ.ಎರಡು ತಾಲೂಕಿಗೆ ಒಂದೇ ಎಸ್ಪಿ ಕಚೇರಿ ರಾಜ್ಯದಲ್ಲಿ ಎಲ್ಲೆಲ್ಲೂ ಇಲ್ಲ. ಆಡಳಿತ ಕಚೇರಿಗಾಗಿ 2.81 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ ಎಂದರು.

ಶಿಕ್ಷಕರ ಆಕಾಂಕ್ಷಿಗಳಿಗೆ ಸರ್ಕಾರ ಒಳ್ಳೆಯ ಸುದ್ದಿ: ಫೆಬ್ರವರಿ 2023 ರಲ್ಲಿ ಮತ್ತೆ CET

ಈ ಹಿಂದೆ 10 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು ಆದರೆ, ಸುಮಾರು 3,800 ಶಿಕ್ಷಕರನ್ನು ಮಾತ್ರ ಭರ್ತಿ ಮಾಡಲಾಗಿತ್ತು. ಈ ಬಾರಿ 15 ಸಾವಿರ ಶಿಕ್ಷಕರ ಹುದ್ದೆಗಳ (Teacher Jobs) ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇನ್ನಷ್ಟು ಹುದ್ದೆಗಳನ್ನು ಭರ್ತಿ ಮಾಡುವ ವಿಶ್ವಾಸವಿದೆ. ಉಳಿದ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರವು ನವೆಂಬರ್‌ನಲ್ಲಿ ಟಿಇಟಿ ಪರೀಕ್ಷೆ ಮತ್ತು ಮುಂದಿನ ವರ್ಷದ ಫೆಬ್ರವರಿಯಲ್ಲಿ ಮತ್ತೊಂದು ಸುತ್ತಿನ CET ಶಿಕ್ಷಕರ ಪರೀಕ್ಷೆಯನ್ನು ನಡೆಸಲಿದೆ. ಈ ಮೂಲಕ ಶಿಕ್ಷಕರ ಕೊರತೆ ನೀಗಿಸಲು ಪ್ರಯತ್ನಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದರು. ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಇಂದು ಬೆಂಗಳೂರಿನ ತಿಮ್ಮಯ್ಯ ರಸ್ತೆಯಲ್ಲಿರುವ ಕಾರ್ಪೊರೇಷನ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಉಪಕ್ರಮದಡಿ ಬಿಬಿಎಂಪಿ ಮತ್ತು ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಎಜುಕೇಶನ್‌ನಿಂದ ನವೀಕರಿಸಿದ ಐದು ಸರ್ಕಾರಿ ಶಾಲೆಗಳನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಸ್ವಾವಲಂಬಿ ಮತ್ತು ಸ್ವಾಭಿಮಾನದ ಜೀವನ ನಡೆಸಲು ಮಾರ್ಗದರ್ಶನ ನೀಡುವ ಶಿಕ್ಷಣ ನೀಡಬೇಕೆಂಬ ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ಹಿರಿಯರ ಕನಸನ್ನು ನನಸು ಮಾಡಲು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೆ ತರಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಬಗ್ಗೆ ಯೋಚಿಸಿಲ್ಲ : ಸಚಿವ ಆರ್​.ಅಶೋಕ್​

Karnataka Police Recruitment 2022: Notification for 5000 police posts soon

Comments are closed.