KPSC ನೇಮಕಾತಿ 2023 : ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ (Karnataka Public Service Commission Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಕಾರ ಸಂಘಗಳ (HK) ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ : 53 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಪೋಸ್ಟ್ ಹೆಸರು : ಸಹಕಾರ ಸಂಘಗಳ ಇನ್ಸ್ಪೆಕ್ಟರ್ (HK)
ವೇತನ : ರೂ.27650-52650/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ ವಿಜ್ಞಾನ, ಮಾರ್ಕೆಟಿಂಗ್ ಮತ್ತು ಸಹಕಾರ, ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆಯಲ್ಲಿ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಮೇ 2, 2023 ರಂತೆ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC/ST/Cat-I ಅಭ್ಯರ್ಥಿಗಳು : 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು : 03 ವರ್ಷಗಳು
PH/ವಿಧವೆ ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ :
SC/ST/Cat-I ಮತ್ತು PH ಅಭ್ಯರ್ಥಿಗಳು : ರೂ.35/-
ಮಾಜಿ ಸೈನಿಕ ಅಭ್ಯರ್ಥಿಗಳು ರೂ.85/-
Cat-2A/2B/3A & 3B ಅಭ್ಯರ್ಥಿಗಳು : ರೂ.335/-
ಸಾಮಾನ್ಯ ಅಭ್ಯರ್ಥಿಗಳು : ರೂ.635/-

ಪಾವತಿ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02 ಮೇ 2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 03 ಮೇ 2023

ಇದನ್ನೂ ಓದಿ : KMF TUMUL Recruitment 2023 : ವಿವಿಧ ಸಹಾಯಕ ವ್ಯವಸ್ಥಾಪಕ, ಜೂನಿಯರ್ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : RDPR ಕರ್ನಾಟಕ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ

ಸೂಚನೆ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

  • ಕೇಂದ್ರ ಕಚೇರಿ ಮಾಹಿತಿ ಕೇಂದ್ರ : 080-30574957/30574901
  • ಪ್ರಾಂತೀಯ ಕಛೇರಿ ಮೈಸೂರು : 0821-2545956
  • ಪ್ರಾಂತೀಯ ಕಛೇರಿ ಬೆಳಗಾವಿ : 0831-2475345
  • ಪ್ರಾಂತೀಯ ಕಛೇರಿ ಕಲಬುರಗಿ : 08472-227944
  • ಪ್ರಾಂತೀಯ ಕಛೇರಿ ಶಿವಮೊಗ್ಗ : 08182-228099
  • ಸಹಾಯವಾಣಿ ಸಂಖ್ಯೆ : 18005728707

Karnataka Public Service Commission : KPSC Recruitment 2023 : Application Invitation for Inspector Posts

Comments are closed.