ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ : ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (Karnataka State Agriculture Department Recruitment 2023) ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ತಾಂತ್ರಿಕ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರಕಾರಿ ಕೃಷಿ ಇಲಾಖೆಯಲ್ಲಿ ಕೆಲಸ ಮಾಡುಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)
ಹುದ್ದೆಗಳ ಸಂಖ್ಯೆ : 03 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ತಾಂತ್ರಿಕ ಸಲಹೆಗಾರ

ಶೈಕ್ಷಣಿಕ ಅರ್ಹತೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅನುಭವದ ವಿವರ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕ್ಷೇತ್ರ ಮಟ್ಟದಲ್ಲಿ 05 ವರ್ಷಗಳ ಅನುಭವ ಹೊಂದಿರಬೇಕು.

ವಯಸ್ಸಿನ ಮಿತಿ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KSDA ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

ಆಯ್ಕೆ ಪ್ರಕ್ರಿಯೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

KSDA ನೇಮಕಾತಿ (ತಾಂತ್ರಿಕ ಸಲಹೆಗಾರ) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೃಷಿ ನಿರ್ದೇಶಕರು, ಕೃಷಿ ಕಮಿಷನರೇಟ್, ಶೇಷಾದ್ರಿ ರಸ್ತೆ, ಬೆಂಗಳೂರು-01 ಇವರಿಗೆ ಮಾರ್ಚ್‌ 20, 2023ರ ಅಥವಾ ಮೊದಲು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : ಸರಕಾರಿ ಆಯುರ್ವೇದ ಆಸ್ಪತ್ರೆ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : KVB ನೇಮಕಾತಿ 2023 : ವಿವಿಧ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಮೈಸೂರು ಪೇಂಟ್ಸ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03 ಮಾರ್ಚ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಮಾರ್ಚ್ 2023

Karnataka State Agriculture Department Recruitment 2023 : Application Invitation for Various Posts

Comments are closed.