KEA Recruitment : ಕಿರಿಯ ಪಶುವೈದ್ಯಕೀಯ ಪರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 21,400– 42,000 ರೂ. ವೇತನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examinations Authority) ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿನ ಖಾಲಿ ಇರುವ ಕಿರಿಯ ಪಶುವೈದ್ಯಕೀಯ ಪರೀಕ್ಷಕರ (Junior Veterinary Inspector) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 250 ಹುದ್ದೆಗಳಿಗೆ ಅರ್ಜಿ (KEA Recruitment) ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್‌ 26, 2022 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಡುವುದರ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳ ಮಾಸಿಕ ವೇತನವು 21,400 ರೂ–42,000 ರೂ. ಆಗಿದೆ.

ಕಿರಿಯ ಪಶುವೈದ್ಯಕೀಯ ಪರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಮಾಹಿತಿ ಓದಿ :

ಖಾಲಿ ಇರುವ ಒಟ್ಟೂ ಹುದ್ದೆಗಳು : 250

ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : ಅಕ್ಟೋಬರ್‌ 5, 2022
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : ನವೆಂಬರ್‌ 26 , 2022
ಶುಲ್ಕ ಪಾವತಿಯ ಕೊನೆ ದಿನಾಂಕ : ನವೆಂಬರ್‌ 28, 2022

ವೇತನ :
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 21,400–42,000 ರೂ.ಗಳು.

ಇದನ್ನೂ ಓದಿ : HPSC Recruitment 2022 :53 ಉಪವಿಭಾಗೀಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್‌ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ/ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳಾಗಿರಬೇಕು ಮತ್ತು ಗರಿಷ್ಠ ವಯೋಮಿತಿಯು 35 ವರ್ಷಗಳು. ಪ್ರವರ್ಗ– 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಮತ್ತು ಪ.ಜಾ, ಪ.ಪಂ.,ಪ್ರವರ್ಗ–1 ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕ :
ಸಾಮಾನ್ಯ/ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು – 750 ರೂ.
ಪ.ಜಾ/ಪ.ಪಂ./ಪ್ರವರ್ಗ –1/ ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು – 500 ರೂ.

ಉದ್ಯೋಗ ಸ್ಥಳ :
ಕೆಇಎ ನೇಮಕಾತಿ ಅಧಿಸೂಚನೆಯ ಪ್ರಕಾರ ಕಿರಿಯ ಪಶುವೈದ್ಯಕೀಯ ಪರೀಕ್ಷಕರು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉದ್ಯೋಗ ಸ್ಥಳವು ಬೆಂಗಳೂರು ಆಗಿದೆ.

ಅರ್ಜಿ ಸಲ್ಲಿಕೆ ಹೇಗೆ :
ಕಿರಿಯ ಪಶುವೈದ್ಯಕೀಯ ಪರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಇಎಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವುದರ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ‌‌

ಇದನ್ನೂ ಓದಿ : Post Office Recruitment 2022:188 ಪೋಸ್ಟ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(KEA Recruitment application for the job of 250 junior veterinary inspector posts)

Comments are closed.