KFCSC ನೇಮಕಾತಿ 2023 : ವಿವಿಧ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್ ನೇಮಕಾತಿ (KFCSC Recruitment 2023) ಅಧಿಕೃತ ಅಧಿಸೂಚನೆ ಏಪ್ರಿಲ್ 2023 ರ ಮೂಲಕ ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

KFCSC ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC)
ಹುದ್ದೆಗಳ ಸಂಖ್ಯೆ : 386 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್
ವೇತನ : ರೂ.11600-43200/- ಪ್ರತಿ ತಿಂಗಳು

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ :

  • ಸಹಾಯಕ ವ್ಯವಸ್ಥಾಪಕ : 10 ಹುದ್ದೆಗಳು
  • ಹಿರಿಯ ಸಹಾಯಕರು : 57 ಹುದ್ದೆಗಳು
  • ಹಿರಿಯ ಸಹಾಯಕರು (ಖಾತೆಗಳು) : 33 ಹುದ್ದೆಗಳು
  • ಕ್ವಾಲಿಟಿ ಇನ್ಸ್‌ಪೆಕ್ಟರ್ : 23 ಹುದ್ದೆಗಳು
  • ಕಿರಿಯ ಸಹಾಯಕರು ; 263 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ KFCSC ನೇಮಕಾತಿ ನಿಯಮಗಳ ಪ್ರಕಾರ ಸಂಬಂಧಪಟ್ಟ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.

ವಯಸ್ಸಿನ ಮಿತಿ :
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು KFCSC ನೇಮಕಾತಿ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಸಂಬಳ (ತಿಂಗಳಿಗೆ) ವಿವರ :

  • ಸಹಾಯಕ ವ್ಯವಸ್ಥಾಪಕರು : ರೂ.22800-43200/-
  • ಹಿರಿಯ ಸಹಾಯಕರು : ರೂ.14550-26700/-
  • ಹಿರಿಯ ಸಹಾಯಕರು (ಖಾತೆಗಳು) : ರೂ.14550-26700/-
  • ಗುಣಮಟ್ಟದ ಇನ್ಸ್ಪೆಕ್ಟರ್ : ರೂ.14550-26700/-
  • ಕಿರಿಯ ಸಹಾಯಕರು ರೂ.11600-21000/-

ಇದನ್ನೂ ಓದಿ : RGUHS ನೇಮಕಾತಿ 2023 : ವಿವಿಧ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : MSIL ನೇಮಕಾತಿ 2023 : ವಿವಿಧ ವ್ಯವಸ್ಥಾಪಕ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ 2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20 ಮೇ 2023

KFCSC Recruitment 2023 : Application Invitation for Various Assistant Posts

Comments are closed.