KFD ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ (KFD Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಕರ್ನಾಟಕ ಸರಕಾರ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

KFD Recruitment 2023 : ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಸಂಸ್ಥೆಯ ಹೆಸರು : ಕರ್ನಾಟಕ ಅರಣ್ಯ ಇಲಾಖೆ (KFD)
ಹುದ್ದೆಗಳ ಸಂಖ್ಯೆ : 19 ಹುದ್ದೆಗಳು
ಉದ್ಯೋಗ ಸ್ಥಳ : ಕೊಡಗು, ಚಾಮರಾಜನಗರ, ಮೈಸೂರು ಹಾಗೂ ಶಿವಮೊಗ್ಗ
ಹುದ್ದೆಯ ಹೆಸರು : ಆನೆ ಕವಾಡಿಗ ಹುದ್ದೆಗಳು
ವೇತನ : ರೂ.18600-32600/- ಪ್ರತಿ ತಿಂಗಳು

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಖಾಲಿ ಇರುವ ವೃತ್ತದ ವಿವರ :
ಕೊಡಗು : 4 ಹುದ್ದೆಗಳು
ಚಾಮರಾಜನಗರ : 6 ಹುದ್ದೆಗಳು
ಮೈಸೂರು : 5 ಹುದ್ದೆಗಳು
ಶಿವಮೊಗ್ಗ : 4 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನ್ನಡ ಮಾತನಾಡುವ ಮತ್ತು ತಿಳುವಳಿಕೆಯನ್ನು ಹೊಂದಿರಬೇಕು.

ವಯೋಮಿತಿ ವಿವರ :
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
2A, 2B, 3A, 3B, OBC ಅಭ್ಯರ್ಥಿಗಳು : 03 ವರ್ಷಗಳು
SC, ST ಅಭ್ಯರ್ಥಿಗಳು : 5 ವರ್ಷಗಳು

ಕರ್ನಾಟಕ ಅರಣ್ಯ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿಯ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಏಪ್ರಿಲ್‌ 29, 2023 ರಂದು ಅಥವಾ ಮೊದಲು ಆಯಾ ಅರಣ್ಯ ವಲಯಕ್ಕೆ (ಅಧಿಕೃತ ಅಧಿಸೂಚನೆಯ ಪ್ರಕಾರ)ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : KPSC ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KPSC ನೇಮಕಾತಿ 2023 : ವಿವಿಧ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ಮಾರ್ಚ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಏಪ್ರಿಲ್‌ 2023

KFD Recruitment 2023 : Apply for Various Posts

Comments are closed.