ಕರ್ನಾಟಕ ಗೃಹ ಮಂಡಳಿ ನೇಮಕಾತಿ (KHB Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ GIS ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಕರ್ನಾಟಕ ಗೃಹ ಮಂಡಳಿ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಹೌಸಿಂಗ್ ಬೋರ್ಡ್ (KHB)
ಹುದ್ದೆಗಳ ಸಂಖ್ಯೆ : 1 ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : GIS ಸ್ಪೆಷಲಿಸ್ಟ್ ಹುದ್ದೆ
ಸಂಬಳ : KHB ಮಾನದಂಡಗಳ ಪ್ರಕಾರ
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಗೃಹ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು B.E ಅಥವಾ B.Tech, M.Tech in Civil Engineering, M.Sc GIS/ರಿಮೋಟ್ ಸೆನ್ಸಿಂಗ್‌ನಲ್ಲಿ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ಅನುಭವದ ವಿವರ :
- ಅಭ್ಯರ್ಥಿಗಳು GIS/ರಿಮೋಟ್ ಸೆನ್ಸಿಂಗ್ ಕ್ಷೇತ್ರದಲ್ಲಿ ಕನಿಷ್ಠ 02 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
- ಡೇಟಾ ಸಂಗ್ರಹಣೆ ಮತ್ತು ನಿರ್ವಹಣೆ ಸೇರಿದಂತೆ GIS ಸಂಬಂಧಿತ ಡೇಟಾಬೇಸ್‌ಗಳು ಮತ್ತು ಲೇಯರ್‌ಗಳನ್ನು ನಿರ್ವಹಿಸುವಲ್ಲಿ/ಅಭಿವೃದ್ಧಿಪಡಿಸುವಲ್ಲಿ ಅನುಭವವನ್ನು ಹೊಂದಿರಬೇಕು.
- ಜಿಯೋಸ್ಪೇಷಿಯಲ್ ಡೇಟಾವನ್ನು ವಿಶ್ಲೇಷಿಸುವಲ್ಲಿ, ಅರ್ಥೈಸುವಲ್ಲಿ ಮತ್ತು ಪ್ರಸ್ತುತಪಡಿಸುವಲ್ಲಿ ಅನುಭವವನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಆರ್ಕ್ ಜಿಐಎಸ್ ಅಥವಾ ಅಂತಹುದೇ ಜಿಐಎಸ್ ಸಾಫ್ಟ್‌ವೇರ್ ಅನ್ನು ಬಳಸುವ ಅನುಭವವನ್ನು ಹೊಂದಿರಬೇಕು.
- ವಯೋಮಿತಿ: ಕರ್ನಾಟಕ ಹೌಸಿಂಗ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 25 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಗೃಹ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಗೃಹ ಮಂಡಳಿ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಗೃಹ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, cheifengineerkhb@gmail.com ಗೆ 16-Mar-2023 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಇದನ್ನೂ ಓದಿ : ಉಡುಪಿ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿ 2023 : ಎಸ್‌ಎಸ್‌ಎಲ್‌ಸಿ ಆದವರಿಗೆ ಉದ್ಯೋಗಾವಕಾಶ
ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 08 ಮಾರ್ಚ್ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 16 ಮಾರ್ಚ್ 2023
KHB Recruitment 2023 : GIS Specialist Job Vacancy Apply Immediately