KITS ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿಯು ನೇಮಕಾತಿ (KITS Recruitment 2023) ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಕೆಐಟಿಎಸ್‌ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ (KITS)
ಹುದ್ದೆಗಳ ಸಂಖ್ಯೆ : 7 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಪ್ರಾಜೆಕ್ಟ್ ಎಕ್ಸಿಕ್ಯೂಟಿವ್
ವೇತನ : ರೂ.45000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿಯು ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ವಿವರ :
ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ ವಿವರ :
ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿಯನ್ನು ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

KITS ನೇಮಕಾತಿ (ಪ್ರಾಜೆಕ್ಟ್ ಎಕ್ಸಿಕ್ಯೂಟಿವ್) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು :
ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಮತ್ತು [email protected] ಗೆ ಏಪ್ರಿಲ್‌ 17, 2023ರ ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಇದನ್ನೂ ಓದಿ : KPSC ನೇಮಕಾತಿ 2023 : ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KMF TUMUL Recruitment 2023 : ವಿವಿಧ ಸಹಾಯಕ ವ್ಯವಸ್ಥಾಪಕ, ಜೂನಿಯರ್ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 20 ಮಾರ್ಚ್‌ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 17 ಏಪ್ರಿಲ್‌ 2023

KITS Recruitment 2023 : Application Invitation for Various Posts

Comments are closed.