ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ (Koppal Zilla Panchayat Recruitment 2023) ಪ್ರಕಾರ, ಫೆಬ್ರವರಿ 2023ರ ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಸಹಾಯಕ, ಡಿಇಒ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.
ಕೊಪ್ಪಳ ಜಿಲ್ಲಾ ಪಂಚಾಯತ್ ಹುದ್ದೆಗಳ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕೊಪ್ಪಳ ಜಿಲ್ಲಾ ಪಂಚಾಯತ್
ಹುದ್ದೆಗಳ ಸಂಖ್ಯೆ : 3 ಹುದ್ದೆಗಳು
ಉದ್ಯೋಗ ಸ್ಥಳ : ಕೊಪ್ಪಳ
ಹುದ್ದೆಯ ಹೆಸರು : ತಾಂತ್ರಿಕ ಸಹಾಯಕ, ಡಿಇಒ
ವೇತನ : ರೂ.23000-25000/- ಪ್ರತಿ ತಿಂಗಳು
ಕೊಪ್ಪಳ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ತಾಂತ್ರಿಕ ಸಹಾಯಕ : 1 ಹುದ್ದೆ
ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ : 1 ಹುದ್ದೆ
ಡೇಟಾ ಎಂಟ್ರಿ ಆಪರೇಟರ್ (DEO) : 1 ಹುದ್ದೆ
ಕೊಪ್ಪಳ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :
- ತಾಂತ್ರಿಕ ಸಹಾಯಕ : ಈ ಹುದ್ದೆಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ, B.E ಅಥವಾ B.Tech, M.Tech ನಲ್ಲಿ ಉತ್ತೀರ್ಣರಾಗಿರಬೇಕು.
- ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ : ಈ ಹುದ್ದೆಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಕಾಂ, ಎಂ.ಕಾಂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ಡೇಟಾ ಎಂಟ್ರಿ ಆಪರೇಟರ್ (DEO) : ಈ ಹುದ್ದೆಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕೊಪ್ಪಳ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಕೊಪ್ಪಳ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ, ವಯೋಮಿತಿಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಕೊಪ್ಪಳ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ಕೌಶಲ್ಯ ಹಾಗೂ ಸಾಮರ್ಥ್ಯದ ಮೇಲೆ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಕೊಪ್ಪಳ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನ ವಿವರ (ತಿಂಗಳಿಗೆ) :
ತಾಂತ್ರಿಕ ಸಹಾಯಕ : ರೂ. 25,000/-
ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ : ರೂ. 23,000/-
ಕೊಪ್ಪಳ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ ಡೇಟಾ ಎಂಟ್ರಿ ಆಪರೇಟರ್ (DEO) : ರೂ. 23,000/-
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಫೆಬ್ರವರಿ2023
ಜಿಲ್ಲಾಧಿಕಾರಿಗಳ ಕಛೇರಿಯಿಂದ ಅಂತಿಮ ಆಯ್ಕೆ ಪಟ್ಟಿಯ ಪ್ರಕಟಣೆಯ ದಿನಾಂಕ : 10 ಮಾರ್ಚ್ 2023
ಇದನ್ನೂ ಓದಿ : IDBI ಬ್ಯಾಂಕ್ ನೇಮಕಾತಿ 2023 : ವಿವಿಧ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಇದನ್ನೂ ಓದಿ : PDO Recruitment 2023 : ಪಿಡಿಒ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರಕಾರ
ಇದನ್ನೂ ಓದಿ : Bank of Baroda Recruitment 2023 : ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗಮನಿಸಿ: ಕೊಪ್ಪಳ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಆದ koppal.nic.in ನಲ್ಲಿ ಪಡೆದುಕೊಳ್ಳಬಹುದು. ಹಾಗೆಯೇ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ, ಸಹಾಯವಾಣಿ ಸಂಖ್ಯೆ: 08539-220844, 9902374194, 8861337786 ಮೂಲಕ ಸಂಪರ್ಕಿಸಬಹುದಾಗಿದೆ.
Koppal Zilla Panchayat Recruitment 2023 : Apply for Technical Assistant, Data Entry Operator Posts