ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಆಯುಷ್ ನಿರ್ದೇಶನಾಲಯದಲ್ಲಿನ ಮೂಲ ವೃಂದ ಮತ್ತು ಹೈದ್ರಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ಒಟ್ಟು 276 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಸೆಪ್ಟೆಂಬರ್ 14ರವರೆಗೆ ಅರ್ಜಿಸಲ್ಲಿಸಲು ಸಮಯವಕಾಶವನ್ನು ನೀಡಿದೆ.

ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿನ ಆಯುರ್ವೇದ / ಹೋಮಿಯೋಪತಿ ವಿಷಯಗಳಲ್ಲಿ ಪ್ರಾಧ್ಯಾಪಕರು / ಸಹ ಪ್ರಾಧ್ಯಾಪಕರು / ಸಹಾಯಕ ಪ್ರಾಧ್ಯಾಪಕರು / ಶುಶ್ರೂಷಕರ ಗ್ರೂಪ್ ಎ, ಬಿ ಮತ್ತು ಸಿ ವೃಂದದ ತಾಂತ್ರಿಕ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನೆಡೆಸಲಿದೆ.
ವಿದ್ಯಾರ್ಹತೆ:
ವಿದ್ಯಾರ್ಹತೆ: ಗ್ರೂಪ್ -ಎ, ಬಿ ಮತ್ತು ಸಿ ಹುದ್ದೆಗಳಿಗೆ ಪಿಯುಸಿ/ಡಿಪ್ಲೋಮಾ; ಪದವಿ/ಸ್ನಾತಕೋತ್ತರ ಪದವಿ, ಬಿಎಎಂಎಸ್/ಬಿಹೆಚ್ಎಂಎಸ್/ಬಿಯುಎಂಎಸ್/ಬಿಎನ್ ವೈಎಸ್ ವಿದ್ಯಾರ್ಹತೆಯನ್ನು ಕಾನೂನಿನಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲಾಗುವುದು.
ವೇತನದ ವಿವರ:
ಕೆಪಿಎಸ್ಸಿ ಗ್ರೂಪ್ -ಎ, ಬಿ ಮತ್ತು ಸಿ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/-ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸೆಪ್ಟೆಂಬರ್ 14,2020ರೊಳಗೆ ಸಲ್ಲಿಸಬಹುದು.