1112 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕರ 1,112 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ಜಿಲ್ಲಾಧಿಕಾರಿಗಳ ಕಾರ್ಯಾಲಯ ಸೇರಿದಂತೆ ಒಟ್ಟು 27 ಇಲಾಖೆಗಳಲ್ಲಿ ಕರ್ನಾಟಕ (975 ಹುದ್ದೆ) ಹಾಗೂ ಹೈದ್ರಾಬಾದ್ ಕರ್ನಾಟಕ (137 ಹುದ್ದೆ) ವ್ಯಾಪ್ತಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ
ಸಹಾಯಕ ಹುದ್ದೆ : 30,350 ರೂ.-58,250 ರೂ.
ಪ್ರಥಮ ದರ್ಜೆ ಸಹಾಯಕರ ಹುದ್ದೆ : ರೂ.27,650 – 52,650 ರೂ.

ವಿದ್ಯಾರ್ಹತೆ
ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯೋಮಿತಿ
ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ಅರ್ಜಿ ಸಲ್ಲಿಕೆ ಆರಂಭ : 06-02-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-03-2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 07-03-2020

ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ರೂಪಾಯಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಆದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕದ ಜೊತೆಗೆ 35 ರೂಪಾಯಿ ಪ್ರೊಸೆಸಿಂಗ್ ಚಾರ್ಜ್ ನ್ನು ಕಡ್ಡಾಯವಾಗಿ ಪಾವತಿ ಮಾಡಬೇಕು.

ಪರೀಕ್ಷಾ ದಿನಾಂಕ
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ : 09-05-2020
ಸ್ಪರ್ಧಾತ್ಮಕ ಪರೀಕ್ಷೆ :10-05-2020

ಅರ್ಜಿ ಸಲ್ಲಿಸೋದು ಹೇಗೆ ?
ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಕೆಪಿಎಸ್ಸಿಯ ಅಧಿಕೃತ ವೆಬ್ಸೈಟ್ http://www.kpsc.kar.nic.in ಗೆ ಭೇಟಿ ನೀಡಬಹುದಾಗಿದೆ.

Leave A Reply

Your email address will not be published.