ಕರ್ನಾಟಕ ಲೋಕಸೇವಾ ಆಯೋಗವು (KPSC Recruitment 2023) ಸೆಪ್ಟೆಂಬರ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಉದ್ಯೋಗ ಅಧಿಕಾರಿ (HK) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಕೆಪಿಎಸ್‌ಸಿ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ : 01 ಹುದ್ದೆ
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಸಹಾಯಕ ಉದ್ಯೋಗ ಅಧಿಕಾರಿ (HK)
ವೇತನ : ರೂ.30350-58250/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 07-ಅಕ್ಟೋ-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
SC/ST/Cat-I ಅಭ್ಯರ್ಥಿಗಳು : 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು : 03 ವರ್ಷಗಳು
PH/ವಿಧವೆ ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ :
SC/ST/Cat-I & PH ಅಭ್ಯರ್ಥಿಗಳು : ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು : ರೂ.50/-
ಕ್ಯಾಟ್-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು : ರೂ.300/-
ಸಾಮಾನ್ಯ ಅಭ್ಯರ್ಥಿಗಳು : ರೂ.600/-
ಪಾವತಿ ವಿಧಾನ : ಆನ್‌ಲೈನ್
ಇದನ್ನೂ ಓದಿ : ಡಿಫ್ಲೋಮಾ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಸುವರ್ಣಾವಕಾಶ : 89600 ರೂ. ವೇತನ, ಇಂದೇ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ : 37900 ರೂ. ವೇತನ, ಇಂದೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08 ಸೆಪ್ಟೆಂಬರ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಅಕ್ಟೋಬರ್ 2023
ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ : 02 ಡಿಸೆಂಬರ್ 2023
ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ : 03 ಡಿಸೆಂಬರ್ 2023
KPSC Recruitment 2023 : Job opportunity for Graduates in Karnataka Public Service Commission, salary more than 50 thousand