ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ (KPSC Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ : 67 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆ
ವೇತನ : ರೂ.21400-42000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಾಣಿಜ್ಯದಲ್ಲಿ ದ್ವಿತೀಯ ಪಿಯುಸಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಏಪ್ರಿಲ್ 25, 2023 ರಂತೆ ಕನಿಷ್ಠ 18 ವರ್ಷ ವಯಸ್ಸು ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳು : 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ & 3ಬಿ ಅಭ್ಯರ್ಥಿಗಳು : 03 ವರ್ಷಗಳು
ಪಿಹೆಚ್/ವಿಧವೆ ಅಭ್ಯರ್ಥಿಗಳು : 10 ವರ್ಷಗಳು
ಅರ್ಜಿ ಶುಲ್ಕ :
SC/ST/Cat-I ಮತ್ತು PH ಅಭ್ಯರ್ಥಿಗಳು : ರೂ.35/-
ಮಾಜಿ ಸೈನಿಕ ಅಭ್ಯರ್ಥಿಗಳು : ರೂ.85/-
Cat-2A/2B/3A & 3B ಅಭ್ಯರ್ಥಿಗಳು : ರೂ.335/-
ಸಾಮಾನ್ಯ ಅಭ್ಯರ್ಥಿಗಳು : ರೂ.635/-
ಪಾವತಿ ವಿಧಾನ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : ಕ್ಯಾನ್ ಫಿನ್ ಹೋಮ್ಸ್ ನೇಮಕಾತಿ 2023 : ವಿವಿಧ ಅಧಿಕಾರಿ ಹುದ್ದೆಗಳಿಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಮಾರ್ಚ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25 ಏಪ್ರಿಲ್ 2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 26 ಏಪ್ರಿಲ್ 2023
KPSC Recruitment 2023 : Various Accounts Assistant Vacancies Apply Immediately