ಕೆಪಿಎಸ್‌ಸಿ ನೇಮಕಾತಿ : ಪದವೀಧರರಿಗೆ ಸರಕಾರಿ ಉದ್ಯೋಗ, 62600 ರೂ. ವೇತನ, 230 ವಾಣಿಜ್ಯ ತೆರಿಗೆ ನಿರೀಕ್ಷಕರ ಹುದ್ದೆ

ನೀವು ಪದವೀಧರರಾಗಿದ್ರೆ ಸಾಕು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನೌಕರಿ ಗಿಟ್ಟಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ (KPSC Governament Jobs) ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಕರ್ನಾಟಕ ಲೋಕಸೇವಾ ಆಯೋಗವು (KPSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಅದ್ರಲ್ಲೂ (KPSC Recruitment) ಪದವೀಧರರಿಗೆ ವಾಣಿಜ್ಯ ತೆರಿಗೆ ನಿರೀಕ್ಷಕರ (RPC) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಈಗಾಗಲೇ ಅಧಿಕೃತ ಆದೇಶವನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಕೆಪಿಎಸ್‌ಸಿ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ : 230 ಹುದ್ದೆಗಳು
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು : ವಾಣಿಜ್ಯ ತೆರಿಗೆ ನಿರೀಕ್ಷಕರು (RPC)
ವೇತನ : ರೂ.33450-62600/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದನ್ನೂ ಓದಿ : India Post GDS Recruitment 2023 : ಎಸ್ಎಸ್ಎಲ್ ಸಿ ಉತ್ತೀರ್ಣರಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

KPSC Recruitment Govt Jobs for Graduates, 62600 Rs. Pay, 230 Posts of Commercial Tax Inspector
Image Credit Original Source

 

ವಯೋಮಿತಿ :
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 30-Sep-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
SC/ST/Cat-I ಅಭ್ಯರ್ಥಿಗಳು : 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು : 03 ವರ್ಷಗಳು
PH/ವಿಧವೆ ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ:
SC/ST/Cat-I & PH ಅಭ್ಯರ್ಥಿಗಳು : ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಕ್ಯಾಟ್-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು : ರೂ.300/-
ಸಾಮಾನ್ಯ ಅಭ್ಯರ್ಥಿಗಳು : ರೂ.600/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಇದನ್ನೂ ಓದಿ : HESCOM Recruitment 2023 : ಐಟಿಐ ಉತ್ತೀರ್ಣರಾಗಿದ್ದೀರಾ ? ಹಾಗಾದ್ರೆ ಹೆಸ್ಕಾಂನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಸೆಪ್ಟೆಂಬರ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಸೆಪ್ಟೆಂಬರ್‌ 2023
ಕನ್ನಡ ಭಾಷಾ ಪರೀಕ್ಷೆಯ ತಾತ್ಕಾಲಿಕ ದಿನಾಂಕ : 04 ನವೆಂಬರ್ 2023
ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ದಿನಾಂಕ : 05 ನವೆಂಬರ್ 2023

KPSC Recruitment : Govt Jobs for Graduates, 62600 Rs. Pay, 230 Posts of Commercial Tax Inspector

 

Comments are closed.