KSDA Recruitment 2023 : ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿಯು (KSDA Recruitment 2023) ಫೆಬ್ರವರಿ 2023ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ತಾಂತ್ರಿಕ ವ್ಯವಸ್ಥಾಪಕ, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)
ಹುದ್ದೆಗಳ ಸಂಖ್ಯೆ : 08 ಹುದ್ದೆಗಳು
ಉದ್ಯೋಗ ಸ್ಥಳ : ಮಂಡ್ಯ
ಹುದ್ದೆಯ ಹೆಸರು : ಅಸಿಸ್ಟೆಂಟ್ ಟೆಕ್ನಿಕಲ್ ಮ್ಯಾನೇಜರ್, ಕಂಪ್ಯೂಟರ್ ಪ್ರೋಗ್ರಾಮರ್
ವೇತನ : ರೂ.16000-30000/- ಪ್ರತಿ ತಿಂಗಳು

ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)ಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ : 1 ಹುದ್ದೆ
ತಾಲೂಕು ತಾಂತ್ರಿಕ ವ್ಯವಸ್ಥಾಪಕರು : 3 ಹುದ್ದೆಗಳು
ಸಹಾಯಕ ತಾಂತ್ರಿಕ ವ್ಯವಸ್ಥಾಪಕ : 4 ಹುದ್ದೆಗಳು

ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)ಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಬಿ.ಟೆಕ್, ಎಂಸಿಎ, ಡಿಪ್ಲೊಮಾ, ಪದವಿಯನ್ನು ಪೂರ್ಣಗೊಳಿಸಬೇಕು.
  • ತಾಲೂಕು ತಾಂತ್ರಿಕ ವ್ಯವಸ್ಥಾಪಕರು : ಈ ಹುದ್ದೆಗಳಿಗೆ ಅಭ್ಯರ್ಥಿಗಳು ವಿಶ್ವವಿದ್ಯಾಲಯಗಳಲ್ಲಿ ಕೃಷಿಯಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ಸಹಾಯಕ ತಾಂತ್ರಿಕ ವ್ಯವಸ್ಥಾಪಕ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ವಿಶ್ವವಿದ್ಯಾಲಯಗಳಲ್ಲಿ ಪದವಿ, ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)ಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಅನುಭವದ ವಿವರ :

  • ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ : ಅಭ್ಯರ್ಥಿಗಳು ಡಿಪ್ಲೊಮಾ, ಬಿ.ಟೆಕ್ ಹೊಂದಿರುವವರಿಗೆ 01 ವರ್ಷ ಮತ್ತು ಎಂಸಿಎ ಹೊಂದಿರುವವರಿಗೆ 1.5 ವರ್ಷಗಳ ಅನುಭವ ಹೊಂದಿರಬೇಕು.
  • ತಾಲೂಕು ತಾಂತ್ರಿಕ ವ್ಯವಸ್ಥಾಪಕರು : ಅಭ್ಯರ್ಥಿಗಳು ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 02 ವರ್ಷಗಳ ಅನುಭವವನ್ನು ಹೊಂದಿರಬೇಕು.
  • ಅಸಿಸ್ಟೆಂಟ್ ಟೆಕ್ನಿಕಲ್ ಮ್ಯಾನೇಜರ್ : ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ 01 ವರ್ಷದ ಅನುಭವ ಹೊಂದಿರಬೇಕು.

ವಯೋಮಿತಿ ವಿವರ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KSDA ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ಕೃಷಿ ಇಲಾಖೆ (KSDA)ಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು (ತಿಂಗಳಿಗೆ) ವೇತನ ವಿವರ :
ಕಂಪ್ಯೂಟರ್ ಪ್ರೋಗ್ರಾಮರ್/ಆಪರೇಟರ್ : ರೂ.16000/-
ತಾಲೂಕು ತಾಂತ್ರಿಕ ವ್ಯವಸ್ಥಾಪಕರು : ರೂ.30000/-
ಸಹಾಯಕ ತಾಂತ್ರಿಕ ವ್ಯವಸ್ಥಾಪಕ : ರೂ.25000/-

ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ :
ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜಂಟಿ ಕೃಷಿ ನಿರ್ದೇಶಕರು, ಮಂಡ್ಯ ಜಿಲ್ಲೆ, ಮಂಡ್ಯ, ಕರ್ನಾಟಕ ಇವರಿಗೆ ಮಾರ್ಚ್‌ 06, 2023ರ ಮೊದಲು ನೋಂದಣಿ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : KSP Recruitment 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ

ಇದನ್ನೂ ಓದಿ : NABFINS ನೇಮಕಾತಿ 2023 : ವಿವಿಧ ಕಂಪನಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : CSG ಕರ್ನಾಟಕ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಫೆಬ್ರವರಿ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 ಮಾರ್ಚ್ 2023

KSDA Recruitment 2023: Karnataka State Agriculture Department Appointment: Applications for various posts

Comments are closed.