KSEDCL ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ (KSEDCL Recruitment 2023) ಅಧಿಕೃತ ಅಧಿಸೂಚನೆಯ ಏಪ್ರಿಲ್ 2023 ರ ಮೂಲಕ ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಕೆಎಸ್‌ಇಡಿಸಿಎಲ್‌ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ನಿಯಮಿತ (KSEDCL)
ಹುದ್ದೆಗಳ ಸಂಖ್ಯೆ : 26 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಸಹಾಯಕ, ಸಹಾಯಕ ವ್ಯವಸ್ಥಾಪಕ
ವೇತನ : ರೂ.30350-97100/- ಪ್ರತಿ ತಿಂಗಳು

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ :

  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ : 4 ಹುದ್ದೆಗಳು
  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ : 2 ಹುದ್ದೆಗಳು
  • ಖಾಸಗಿ ಕಾರ್ಯದರ್ಶಿ – ಗುಂಪು-ಸಿ : 1 ಹುದ್ದೆಗಳು
  • ಹಿರಿಯ ಸಹಾಯಕ (ತಾಂತ್ರಿಕ) – ಗುಂಪು-ಸಿ : 4 ಹುದ್ದೆಗಳು
  • ಹಿರಿಯ ಸಹಾಯಕ (ತಾಂತ್ರಿಕೇತರ) – ಗುಂಪು-C : 3 ಹುದ್ದೆಗಳು
  • ಸಹಾಯಕ (ತಾಂತ್ರಿಕ) – ಗುಂಪು-ಸಿ : 6 ಹುದ್ದೆಗಳು
  • ಸಹಾಯಕ (ತಾಂತ್ರಿಕವಲ್ಲದ) – ಗುಂಪು-ಸಿ : 6 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ KSEDCL ನಿಯಮಗಳ ಪ್ರಕಾರ ಸಂಬಂಧ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.

ವಯಸ್ಸಿನ ಮಿತಿ :
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು KSEDCL ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಸಂಬಳ (ತಿಂಗಳಿಗೆ) ವಿವರ :

  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ : ರೂ.52650-97100/-
  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ : ರೂ.52650-97100/-
  • ಖಾಸಗಿ ಕಾರ್ಯದರ್ಶಿ – ಗುಂಪು-ಸಿ : ರೂ.40900-78200/-
  • ಹಿರಿಯ ಸಹಾಯಕ (ತಾಂತ್ರಿಕ) – ಗುಂಪು-ಸಿ : ರೂ.33450-62600/-
  • ಹಿರಿಯ ಸಹಾಯಕ (ತಾಂತ್ರಿಕೇತರ) – ಗುಂಪು-ಸಿ : ರೂ.33450-62600/-
  • ಸಹಾಯಕ (ತಾಂತ್ರಿಕ) – ಗುಂಪು-ಸಿ : ರೂ.30350-58250/-
  • ಸಹಾಯಕ (ತಾಂತ್ರಿಕವಲ್ಲದ) – ಗುಂಪು-ಸಿ : ರೂ.30350-58250/-

ಇದನ್ನೂ ಓದಿ : KFCSC ನೇಮಕಾತಿ 2023 : ವಿವಿಧ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20 ಮೇ 2023

KSEDCL Recruitment 2023 : Job Vacancy for Various Posts, Apply Immediately

Comments are closed.